ಜಗತ್ ಪ್ರಸಿದ್ಧ ಮಂಗಳೂರು ದಸರಾವನ್ನು ಸರಕಾರದ ಮಾರ್ಗಸೂಚಿಯಂತೆ ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸುವ ನಿರ್ಧಾರವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಮಂಗಳೂರು ದಸರಾ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜತೆ ಕರ್ನಾಟಕ ಕರಾವಳಿಯ ಆರ್ಥಿಕ ಪುನಶ್ಚೇತನ ಅಡಗಿದೆ. ದಸರಾ ಸಂದರ್ಭ ಕೊರೋನ ದೇಶದಿಂದ ಮುಕ್ತಗೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಾರ್ಥನೆಯೂ ಶ್ರೀಕ್ಷೇತ್ರದಲ್ಲಿ ನಡೆಯಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ನಿರ್ಧರಿಸಲಾಗಿದೆ. ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕ ದಸರಾ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.








