ಮಂಗಳೂರು ಬ್ಲಾಸ್ಟ್ ಹಿಂದೆ ಭಯೋತ್ಪಾದನೇ ಲಿಂಕ್ – ಆರಗ ಜ್ಞಾನೇಂದ್ರ…
ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಲಾಸ್ಟ್ ಹಿಂದೆ ಭಯೋತ್ಪಾದಕರ ಶಂಕೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನಲ್ಲಿ ನಿನ್ನೆ ರಿಕ್ಷಾ ಒಂದರಲ್ಲಿ ಘಟಿಸಿದ ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಗೆ ಉನ್ನತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಮ್ಮ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕೇಂದ್ರದ ಭದ್ರತಾ ಪಡೆಗಳ ಜೊತೆಗೆ ಸಹ ಮಾತುಕತೆ ಆಗಿದ್ದು ಅವರೂ ಕೂಡ ಕಾರ್ಯಚರಣೆಗೆ ಇಳಿದಿದ್ದಾರೆ.
ಈ ಸ್ಫೋಟದ ಹಿಂದೆ ಭಯೋತ್ಪಾದಕ ಚಟುವಟಿಕೆಗಳ ಲಿಂಕ್ ಇರುವುದು ಕಂಡು ಬಂದಿದೆ. ನಮ್ಮ ಪೊಲೀಸರು ಶೀಘ್ರದಲ್ಲಿ ಪ್ರಕರಣವನ್ನು ಭೇದಿಸಲಿದ್ದಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
Manguluru Blast: Terror Link Behind Mangaluru Blast – Araga Gyanendra…








