ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅರೆಸ್ಟ್
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯನ್ನ ಜಾರಿ ನಿರ್ದೇಶನಾಲಯ ತೀವ್ರಗಳಿಸಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಇ ಡಿ ಬಂಧಿಸಿದೆ. ಈ ಹಿಂದೆ ಸಚಿವ ಪಾರ್ಥ ಚಟರ್ಜಿ ಅವರನ್ನ ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಮಾಣಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿದ್ದರು. ಈ ವರ್ಷದ ಜೂನ್ನಲ್ಲಿ ಕೋಲ್ಕತ್ತಾ ಹೈಕೋರ್ಟ್ನ ಆದೇಶದ ಮೇರೆಗೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಮಾಣಿಕ್ ಭಟ್ಟಾಚಾರ್ಯ ಅವರು ಸಿಬಿಐ ಮುಂದೆ ಹಾಜರಾಗಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಈ ಪ್ರಕರಣದಲ್ಲಿ ಇ ಡಿ ಯಿಂದ ಬಂಧನಕ್ಕೊಳಗಾದ ಎರಡನೇ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ. ಇದಕ್ಕೂ ಮುನ್ನ ಜುಲೈನಲ್ಲಿ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಗಿತ್ತು. ಟಿಎಂಸಿಯ ಹಿರಿಯ ನಾಯಕರಾಗಿದ್ದ ಪಾರ್ಥ ಚಟರ್ಜಿ ಅವರಿಗೆ ಮಮತಾ ಬ್ಯಾನರ್ಜಿ ಸಚಿವ ಸ್ಥಾನದಿಂದ ಹೊರಹಾಕಿದ್ದರು. ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕ ಅರ್ಪಿತಾ ಮುಖರ್ಜಿ ಅವರ ಎರಡು ಫ್ಲಾಟ್ಗಳಿಂದ ಇಡಿ 50 ಕೋಟಿ ರೂ. ವಶಪಡಿಸಿಕೊಳ್ಳಲಾಗಿತ್ತು.
Manik Bhattacharya: Teacher Recruitment Scam – TMC MLA Arrested
ಇದನ್ನೂ ಓದಿ : https://saakshatv.com/rape-accused-c-d…pe-accused-ex-ci/








