ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ನನ್ನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ (Manikanth Rathod) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಪ್ರಿಯಾಂಕ್ ಖರ್ಗೆ ಅವರ ಮೇಲೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಣಿಕಂಢ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ, ಅದಕ್ಕೂ ಮುನ್ನವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಹಾಬಾದ್ ಹತ್ತಿರ ತನ್ನ ಮೇಲೆ ಪ್ರಿಯಾಂಕ್ ಖರ್ಗೆ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ, ಇದು ಕಟ್ಟು ಕಥೆ. ಅವರ ಮೇಲೆ ಹಲ್ಲೆಯಾಗಿಲ್ಲ. ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಆದರೆ, ಪೊಲೀಸರ ತನಿಖೆ ವರದಿ ಸುಳ್ಳು ಎಂದಿದ್ದ ರಾಠೋಡ್, ಸಾಕ್ಷಿ ಬಿಡುಗಡೆ ಮಾಡಲು ಸುದ್ದಿಗೋಷ್ಠಿ ಕರೆದದ್ದರು. ಇದಕ್ಕೂ ಮುನ್ನವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.