ಬೆಂಗಳೂರು : ಇತ್ತೀಚೆಗಷ್ಟೆ ಆಟೋ ಚಾಲಕನ ತಂಗಿಯ ಮದುವೆಗೆ ಸಹಾಯ ಮಾಡಿ ಮಾನವೀಯತೆ ಮರೆದಿದ್ದ ಕಿಚ್ಚ ಸುದೀಪ್, ಇದೀಗ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಭಾರಿ ಮೆಚ್ಚುಗೆಗೆ ಕಾರಣರಾಗಿದ್ದಾರೆ.
ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ಕಡೆಯಿಂದ ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನ ಮಾಡಿರುತ್ತಿರೋ ಸುದೀಪ್ ಇದೀಗ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಚಳ್ಳಕೆರೆ ತಾಲೂಕಿನ ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಹಿರಿಯೂರು ತಾಲೂಕಿನ ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.
ಈ ಶಾಲೆಗಳ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿರೋ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್,
ಕಟ್ಟಡ ದುರಸ್ತಿ, ಶೌಚಾಲಯ ವ್ಯವಸ್ಥೆ, ಪೀಠೋಪಕರಣ, ಶಾಲೆಗಳಿಗೆ ಕಂಪ್ಯೂಟರ್ ನೀಡುವುದು ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಲ್ಲದೇ ಗುಣಮಟ್ಟದ ಶಿಕ್ಷಣ ಸೇರಿದ್ದಂತೆ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಕರೆತರುವ ಪ್ರಯತ್ನವನ್ನು ಈ ಮೂಲಕ ಮಾಡಲಾಗುತ್ತಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.