ಬೆಂಗಳೂರು: ಆಗಸ್ಟ್ 2 ರಂದು ಕೊರೊನಾ ಪಾಸಿಟಿವ್ ಇದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ ಎಸ್ ಯಡಿಯೂರಪ್ಪನವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಯಡಿಯೂರಪ್ಪ ಅವರು ಇದೀಗ ಮತ್ತೆ ಮಾಡಿಸಿದ ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ನಲ್ಲಿ ಕೊರೊನಾ ನೆಗೆಟಿವ್ ಬಂದ ಪರಿಣಾಮ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ ಬಿಎಸ್ ವೈ ಸಂಪೂರ್ಣ ಗುಣಮುಖರಾದ ಹಿನ್ನೆಲೆ ಆಸ್ಪತ್ರೆ ವೈದ್ಯಾಧಿಕಾರಿಗಳು ಯಡಿಯೂರಪ್ಪನವರಿಗೆ ಹೂಗುಚ್ಚ ನೀಡಿ ಸನ್ಮಾನಿಸಿದ್ದಾರೆ. ಇನ್ನೂ ಪೊಲೀಸ್ ಬಿಗಿಭದ್ರತೆಯಲ್ಲಿ ಬಿಎಸ್ ವೈ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದೆ.








