Manipur Bus accident : ಶಾಲಾ ಬಸ್ ಪಲ್ಟಿ ಕನಿಷ್ಠ 15 ವಿದ್ಯಾರ್ಥಿಗಳು ಸಾವು…
ಶಾಲಾ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಇಂಡಿಯಾ ಟುಡೆ ವರದಿಮಾಡಿದೆ. ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 55 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆಯ ಲಾಂಗ್‌ಸೈ ಪ್ರದೇಶದ ಬಳಿ ಓಲ್ಡ್ ಕ್ಯಾಚಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ತಂಬಲ್ನು ಪ್ರೌಡಶಾಲೆಯ ವಿದ್ಯಾರ್ತಿಗಳು ಎರಡು ಬಸ್ ಗಳಲ್ಲಿ ನೋನಿ ಜಿಲ್ಲೆಯ ಖೌಪುಮ್ ಗೆ ಶಾಲ ಪ್ರವಾಸಕ್ಕೆ ತೆರಳಿದ್ದರು. ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
”ಇಂದು ಹಳೇ ಕ್ಯಾಚಾರ್ ರಸ್ತೆಯಲ್ಲಿ ಶಾಲಾ ಮಕ್ಕಳನ್ನ ಹೊತ್ತೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಕ್ಷಣಾ ಕಾರ್ಯಾಚರಣೆಯನ್ನ ಸಂಘಟಿಸಲು ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ಮತ್ತು ಶಾಸಕರು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್‌ನಲ್ಲಿರುವ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ,” ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Manipur Bus accident : At least 15 students killed as school bus overturns in Manipur