ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಜಿರಿಬಾಮ್ ಜಿಲ್ಲೆಯಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿವೆ. ಈ ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಸಚಿವರ ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆ, ಇಂಫಾಲ್ ಪೂರ್ವ, ಪಶ್ಚಿಮ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಶಾಂತಿ ಸ್ಥಾಪನೆಗಾಗಿ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದು, ಭದ್ರತಾ ಪಡೆಗಳನ್ನು ಭಾರಿ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.
ಕೇಂದ್ರ ರಾಜಕೀಯದಲ್ಲಿ ಸಂಚಲನ: ಮೋದಿ ಸಂಪುಟದ 12 ಸಚಿವರಿಗೆ ಗೇಟ್ಪಾಸ್ ಸಾಧ್ಯತೆ, ನವೆಂಬರ್ 18ರ ಔತಣಕೂಟದತ್ತ ಎಲ್ಲರ ಚಿತ್ತ!
ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಸ್ಥಿತ್ಯಂತರಗಳಿಗೆ ವೇದಿಕೆ ಸಿದ್ಧವಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಭರ್ಜರಿ ಸಿದ್ಧತೆ...








