Manish Sisodia : ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಎಎಪಿ ನಾಯಕ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಧ್ಯದಲ್ಲೇ ವಿಚಾರಣೆ ನಡೆಯಲಿದೆ.
ಮನೀಶ್ ಸಿಸೋಡಿಯಾ ಅವರನ್ನ ಸಿಬಿಐ ಭಾನುವರ ಬಂಧಿಸಿತ್ತು. ಸೋಮವಾರ ಮನಿ ಲಾಂಡರಿಂಗ್ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಕೋರ್ಟ್ ಮಾರ್ಚ್ 4 ರ ವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದೆಹಲಿ ಉಪಮುಖ್ಯಮಂತ್ರಿ ತುತ್ತು ವಿಚಾರಣೆಗೆ ಕೋರಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಶೀಘ್ರದಲ್ಲೇ ಪ್ರಕರಣದ ವಿಚಾರಣೆಗೆ ಒಪ್ಪಿಗೆ ನೀಡಿದ್ದಾರೆ. ಇಂದು ಮಧ್ಯಾಹ್ನ 3.50ಕ್ಕೆ ಅರ್ಜಿಯ ವಿಚಾರಣೆ ನಡೆಯಲಿದೆ.
8 ಗಂಟೆಗಳ ವಿಚಾರಣೆಯ ನಂತರ, ಎಎಪಿ ನಾಯಕ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 477 ಎ (ವಂಚನೆ ಮಾಡುವ ಉದ್ದೇಶ) ಮತ್ತು ಸೆಕ್ಷನ್ 7 ರ ಮತ್ತು ಭ್ರಷ್ಟಾಚಾರ ತಡೆ ಕಾಯಿದೆ ಅಡಿಯಲ್ಲಿ ತನಿಖಾ ಸಂಸ್ಥೆ ಭಾನುವಾರ ಬಂಧಿಸಿದೆ.
Manish Sisodia moves SC against arrest in Delhi liquor policy scam