ಕೊರೊನಾದಿಂದ ಗುಣಮುಖರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ : ಆಸ್ಪತ್ರೆಯಿಂದ ಡಿಸ್ಚಾರ್ಜ್
ನವದೆಹಲಿ: ಕರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರದಾನ ಮಂತ್ರಿ ಮನಮೋಹನ್ ಸಿಂಗ್ ಅವರು ಇದೀಗ ಸಂಪೂರ್ಣವಾಗಿ ಗುಣಮುರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. ಏಪ್ರಿಲ್ 19ರಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ.
ಮನಮೋಹನ್ ಸಿಂಗ್ ಅವರು ಕಳೆದ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಕರೊನಾ ವೈರಸ್ ಹಾಗೂ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದರು. ಕರೊನಾ ಲಸಿಕೆ, ಲಸಿಕೆ ವಿತರಣೆ ಕುರಿತು ಪಾರದರ್ಶಕತೆ ಬೇಕು ಎಂದು ಪತ್ರದಲ್ಲಿ ಹೇಳಿದ್ದರು. ಇದಾದ ಬೆನ್ನಲ್ಲೇ ಅವರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇದೀಗ ಗುಣಮುಖರಾಗಿ ಡಿಸ್‌ಚಾರ್ಜ್ ಆಗಿದ್ದಾರೆ.