ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ನಾಗರಿಕರ ಹತ್ಯೆ : ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ – ಮನೋಜ್ ಸಿನ್ಹಾ
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದೆ. ಭಯೋತ್ಪಾದಕರು ಹಾರಿಸಿದ ಗುಂಡಿಗೆ ಮತ್ತೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಈ ರೀತಿ ನಾಗರಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿರುವ ಬೆನ್ನಲ್ಲೇ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ನಾಗರಿಕರ ಪ್ರತಿ ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳಲಾಗುವುದು ಎಂದಿದ್ದಾರೆ.
ಭಾನುವಾರ ಕುಲ್ಗಾಂನಲ್ಲಿ ಅಪರಿಚಿತ ಉಗ್ರರು ಬಿಹಾರ ಮೂಲದ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ. ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರು ನಡೆಸಿರುವ ದಾಳಿಯಿಂದ ಅಕ್ಟೋಬರ್‌ನಲ್ಲೇ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ.
ಈ ಕುರಿತು ‘ಅವಾಂ ಕಿ ಅವಾಜ್’ ರೇಡಿಯೊ ಕಾರ್ಯಕ್ರಮದ ಮೂಲಕ ಮೃತ ನಾಗರಿಕರಿಗೆ ಸಂತಾಪ ಸೂಚಿಸಿದ ಸಿನ್ಹಾ ಅವರು ಮೃತ ನಾಗರಿಕರಿಗಾಗಿ ನಾನು ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗಾಗಿ ಸಂತಾಪ ಸೂಚಿಸುತ್ತೇನೆ. ಉಗ್ರರನ್ನು ಬೇಟೆಯಾಡುತ್ತೇವೆ. ನಾಗರಿಕರ ರಕ್ತದ ಪ್ರತಿ ಹನಿಗೂ ಪ್ರತೀಕಾರ ತೀರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೈಲ ಖರೀದಿಗಾಗಿ ಭಾರತದ ಬಳಿ 500 ಮಿಲಿಯನ್ ಡಾಲರ್ ಸಾಲ ಕೇಳಿದ ಶ್ರೀಲಂಕಾ
ಜಾತಿ ನಿಂದನೆ ಪ್ರಕರಣ : ಅರೆಸ್ಟ್ ಆಗಿ ರಿಲೀಸ್ ಆದ ಯುವರಾಜ್ ಸಿಂಗ್