ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ಪ್ರಮಾಣ ವಚನ
ಶ್ರೀನಗರ, ಅಗಸ್ಟ್ 7: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಶುಕ್ರವಾರ ಮನೋಜ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ವರ್ಷ ಕೇಂದ್ರಾಡಳಿತ ಪ್ರದೇಶವಾದ ನಂತರ ಸಿನ್ಹಾ ಜಮ್ಮು ಮತ್ತು ಕಾಶ್ಮೀರದ ಎರಡನೇ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಗಿರೀಶ್ ಚಂದ್ರ ಮುರ್ಮು ಬುಧವಾರ ರಾಜೀನಾಮೆ ಸಲ್ಲಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಪ್ರದೇಶದ ಹಾಲಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ಸಿನ್ಹಾ ಅವರನ್ನು ಈ ಹುದ್ದೆಗೆ ನೇಮಕ ಮಾಡಿದರು. ಗಿರೀಶ್ ಚಂದ್ರ ಮುರ್ಮು ಅವರು ದೇಶದ ನೂತನ ಸಿಎಜಿ ಆಗಿ ನೇಮಕಗೊಂಡಿದ್ದಾರೆ