ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ 15ಕ್ಕೂ ಅಧಿಕ ಅಧಿಕಾರಿಗಳ ಆಸ್ತಿಗಳ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಎಂಟ್ರಿ ಕೊಟ್ಟು ಶಾಕ್ ನೀಡಿದ್ದಾರೆ.
ಬರೋಬ್ಬರಿ 15 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಮುಖ ಉದ್ಯಮಿಗಳು (Businessman), ಜ್ಯುವೆಲರಿ ಶಾಪ್ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಜಾಪುರ ಬಳಿಯ ಮುಳ್ಳೂರು, ಆರ್ಎಂವಿ ಎಕ್ಸ್ಟೆಕ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಸದ್ಯ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ನಡೆಸುತ್ತಿದ್ದಾರೆ.