ಗುಜರಾತ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ – 6 ಸಾವು
ಸೋಮವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರು ಕಾರ್ಮಿಕರು ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಿಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.
“ರಿಯಾಕ್ಟರ್ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವನ್ನಪ್ಪಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಧ್ಯ ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಉಳಿದಂತೆ ಬೇರೆ ಯಾರು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.