ಹೈದರಾಬಾದ್: ಪೊಲೀಸರು ಎನ್ ಕೌಂಟರ್ ನಲ್ಲಿ 7 ಜನ ಮಾವೋವಾದಿಗಳನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.
ತೆಲಂಗಾಣದ (Telangana) ಮುಲುಗು (Mulugu) ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಹಾಗೂ ಮಾವೋವಾದಿಗಳ (Maoists) ಮಧ್ಯೆ ಎನ್ ಕೌಂಟರ್ ನಡೆದಿದ್ದು, ಈ ವೇಳೆ 7 ಜನ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.
ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಈ ವೇಳೆ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಪೊಲೀಸರು ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಹೀಗಾಗಿ ಘಟನೆಯಲ್ಲಿ 7 ಮಾವೋವಾದಿಗಳು ಬಲಿಯಾಗಿದ್ದಾರೆ.