ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅಪ್ಪುಗೆ ಭಾವಪೂರ್ವ ಶ್ರದ್ಧಾಂಜಲಿ

1 min read

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅಪ್ಪುಗೆ ಭಾವಪೂರ್ವ ಶ್ರದ್ಧಾಂಜಲಿ Puneet saaksha tv

ಮಹಾರಾಷ್ಟ್ರ : ಚಂದನವನದ ರಾಜಕುಮಾರ, ನಟ ಪುನೀತ್ ರಾಜಕುಮಾರ್ ನಿಧನಕ್ಕೆ ಎಲ್ಲಾ ಭಾಷೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಅದರಂತೆ ಮಹಾರಾಷ್ಟ್ರದಲ್ಲಿ ಅಪ್ಪು ಅಭಿಮಾನಿಗಳು ನೆಚ್ಚಿನ ನಟ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಹೌದು..! ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ನಗರದಲ್ಲಿ ಅಪ್ಪುಗೆ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಮರಾಠಿ ಅಭಿಮಾನಿಗಳು ಪ್ಲೆಕ್ಸ್ ಹಾಕಿ ಅಪ್ಪು ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

Puneet saaksha tv

ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ದೊಡ್ಡದಾದ ಫಲಕ ಹಾಕಿದ್ದಾರೆ.

ಪುನೀತ್ ರಾಜಕುಮಾರ್ ಶುಕ್ರವಾರ ಹೃದಯ ಸ್ತಂನದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಅವರ ಅಂತಿಮ ದರ್ಶನಕ್ಕೆ 25 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಎಲ್ಲ ಚಿತ್ರರಂಗದ ಸ್ಟಾರ್ ನಟರು ಅಪ್ಪು ಅಂತಿಮ ದರ್ಶನ ಪಡೆದರು.

ಬಳಿಕ ನಗರದ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಿತು. ಇಂದು ರಾಜ್ ಕುಟುಂಬಸ್ಥರು ಅಪ್ಪು ಸಮಾಧಿಗೆ ಹಾಲು-ತುಪ್ಪ ಕಾರ್ಯ ನೆರವೇರಿಸಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd