ಮರಾಠ ಸಮುದಾಯದ ಮೀಸಲಾತಿ ರದ್ದು –  ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

1 min read
bail plea

ಮರಾಠ ಸಮುದಾಯದ ಮೀಸಲಾತಿ ರದ್ದು –  ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

ನವದೆಹಲಿ :  ಮಹಾರಾಷ್ಟ್ರ ಸರ್ಕಾರ ಮರಾಠಿ ಸಮುದಾಯದವರಿಗೆ ಜಾರಿಗೆ ತಂದಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.  ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದ  ಈ ಮೀಸಲಾತಿ ಅನ್ವಯ ಮರಾಠರಿಗೆ ಶಿಕ್ಷಣ, ಉದ್ಯೋಗದ ಮೀಸಲಾತಿಯನ್ನು  ನೀಡಲಾಗಿತ್ತು. ಆದ್ರೆ ಸುಪ್ರೀಂ ಕೋರ್ಟ್  ಇದನ್ನ ರದ್ದುಗೊಳಿಸಿ ತೀರ್ಪು ನೀಡಿದೆ. ಮರಾಠಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು 2018ರ ನವೆಂಬರ್ 30ರಂದು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿತ್ತು. ಹೆಚ್ಚುವರಿಯಾಗಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಸರ್ಕಾರ ಸೇರಿಸಿತ್ತು.

ಮೀಸಲಾತಿಯು ಶೇ 50ರಷ್ಟನ್ನು ಮೀರುವಂತಿಲ್ಲ. ಹೀಗಾದರೆ ಸಮಾನತೆಗೆ ಧಕ್ಕೆಯಾಗುತ್ತದೆ ಎಂದು ಎಂದು ನ್ಯಾಯಮೂರ್ತಿ ಅಶೋಕ್ ಭೂಷನ್ ನೇತೃತ್ವದ ಐವರ ಸದಸ್ಯರ ನ್ಯಾಯಪೀಠ ತಿಳಿಸಿದ್ದು, ಈ ಮೀಸಲಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಇದೇ ಸಂದರ್ಭ, ಶೇ 50ರ ಗರಿಷ್ಠ ಮಿತಿಯ ಮೀಸಲಾತಿ ನಿಗದಿಪಡಿಸಿದ್ದ 1992ರ ಮಂಡಲ್ ಆದೇಶವನ್ನು ಮರುಪರಿಶೀಲಿಸಬೇಕು ಎಂಬ ಮನವಿಯನ್ನು ತಿರಸ್ಕರಿಸಲಾಗಿದೆ.

ಮರಾಠ ಸಮುದಾಯದವರಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ 2019ರ ಜೂನ್ 28ರಂದು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಬಂದಿದ್ದವು. 2019ರಲ್ಲಿ ಸುಪ್ರೀಂ ಕೋರ್ಟ್ ಈ ಕಾನೂನು ಜಾರಿಗೆ ತಡೆ ತಂದಿತ್ತು. ಇದೀಗ ಮಹಾರಾಷ್ಟ್ರ ಸರ್ಕಾರ ಮರಾಠಿ ಸಮುದಾಯದವರಿಗೆ ಜಾರಿಗೆ ತಂದಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್ ಗೆ ಇದರ ವಿರುದ್ದ ಸಲ್ಲಿಕೆಯಾಗಿದ್ದ ಅರ್ಜಿಗಳ ಅರ್ಜಿದಾರರು ಸಂತಸಗೊಂಡಿದ್ದಾರೆ. ಆದ್ರೆ ಮರಾಠಿ ಸಮುದಾಯದವರು  ಅಸಮಾಧಾನಗೊಂಡಿದ್ದಾರೆ.

ಕೊರೊನಾಗೆ ತಂದೆ ಬಲಿ – ದುಃಖ ತಾಳಲಾರದೇ ಚಿತೆಗೆ ಹಾರಿದ ಮಗಳು

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd