Margaret Alva | ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾ
ನವದೆಹಲಿ : ಮಾಜಿ ಕೇಂದ್ರ ಸಚಿವೆ. ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ Margaret Alva ಅವರನ್ನು ವಿರೋಧ ಪಕ್ಷಗಳ ಜಂಟಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಜುಲೈ 24 ರಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದ್ರೌಪದಿ ಮುರ್ಮು ಹಾಗೂ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಕಣದಲ್ಲಿದ್ದಾರೆ.
ಇನ್ನು ಆಗಸ್ಟ್ ಆರರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಡಳಿತಾರೂಡ ಎನ್ ಡಿಎ ತಮ್ಮ ಅಭ್ಯರ್ಥಿಯನ್ನಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಶ್ ಧನಕರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
ಇತ್ತ ವಿಪಕ್ಷಗಳು ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್ ಆಳ್ವಾ ಅವರಿಗೆ ಮಣೆ ಹಾಕಿವೆ.
ನಿನ್ನೆ ದೆಹಲಿಯಲ್ಲಿ ವಿರೋಧ ಪಕ್ಷಗಳ ಮಹತ್ವದ ಸಭೆ ನಡೆಯಿತು.
ಈ ಸಭೆಯಲ್ಲಿ ಮಾರ್ಗರೇಟ್ ಆಳ್ವ ಅವರ ಹೆಸರನ್ನ ಹಿರಿಯ ರಾಜಕಾರಣಿ, ಎನ್ ಸಿಪಿ ನಾಯಕ ಶರದ್ ಪವಾರ್ ಘೋಷಣೆ ಮಾಡಿದ್ರು.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾರ್ಗರೇಟ್ ಆಳ್ವಾ ಅವರು, ಉಪರಾಷ್ಟಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಆಗಿರೋದು ನನಗೆ ಸಂದ ವಿಶೇಷ ಗೌರವವಾಗಿದೆ ಎಂದು ತಿಳಿಸಿದ್ದಾರೆ.
ನನಗೆ ಸಿಕ್ಕಿರುವ ಅವಕಾಶವನ್ನು ವಿನಯದಿಂದ ಸ್ವೀಕರಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ಇದನ್ನು ಓದಿ : Siddaramaiah | ನಾನು ಮಾಡಿದ ಕೆಲಸ ಯಾವ ಮಂತ್ರಿ ಮಾಡಿಲ್ಲ…!
Margaret Alva | ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾ