ಉಪರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ಅವರನ್ನ ಆಯ್ಕೆ ಮಾಡಿದ ವಿಪಕ್ಷಗಳು….
ರಾಜಸ್ಥಾನದ ಮಾಜಿ ಗವರ್ನರ್ ಮಾರ್ಗರೆಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳು ಆಯ್ಕೆ ಮಾಡಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಭಾನುವಾರ ಸಭೆ ನಡೆಸಿದ ವಿರೋಧ ಪಕ್ಷಗಳ ನಾಯಕರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಗಳಲ್ಲಿ ಚರ್ಚಿಸಬೇಕಾದ ವಿಷಯಗಳು ಮತ್ತು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆಯೂ ವಿರೋಧ ಪಕ್ಷಗಳ ನಾಯಕರು ಚರ್ಚಿಸಿದಂತಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಪಿಎಂ ನಾಯಕಿ ಸಿತಾರಾ ಯೆಚೂರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತಿತರರು ಭಾಗವಹಿಸಿದ್ದರು.
ಈ ಹಿಂದೆ ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರ ಹೆಸರನ್ನು ತಮ್ಮ ಅಭ್ಯರ್ಥಿ ಎಂದು ವಿರೋಧ ಪಕ್ಷಗಳು ಮುಂಚಿತವಾಗಿ ಘೋಷಿಸಿದ್ದವು, ಈ ಭಾರಿ ಎನ್ ಡಿಎ ಘೋಷಿಸಿದ ನಂತರವೇ ಉಪರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್‌ಡಿಎ ಭಾನುವಾರ ಘೋಷಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಇದೇ 19 ರಂದು ಕೊನೆಗೊಳ್ಳಲಿದೆ.