ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಬೂದುಗುಂಬಳಕಾಯಿ ಬಲಿ ವಿಚಾರದಲ್ಲಿ ವಿಚಾರವಾದಿ ಹೆಚ್‌ಎನ್‌ ಬರೆದ ನೊಂದ ಪತ್ರ 

Namratha Rao by Namratha Rao
October 31, 2021
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ವೈರಲ್‌ ಪೋಸ್ಟ್:‌ ಬೂದುಗುಂಬಳಕಾಯಿ ಬಲಿ ವಿಚಾರದಲ್ಲಿ ವಿಚಾರವಾದಿ ಹೆಚ್‌ಎನ್‌ ಬರೆದ ನೊಂದ ಪತ್ರ 

ಹೊಸ ಮನೆಯ ಗೃಹಪ್ರವೇಶ, ಆಯುಧ ಪೂಜೆ, ಬಲಿ, ದೀಪಾವಳಿಯ ಸಂದರ್ಭದಲ್ಲಿಯೂ ಬೂದುಗುಂಬಳ ಕಾಯಿ ಒಡೆಯುವದು ಕಡ್ಡಾಯ ಸಂಪ್ರದಾಯವಾಗಿಬಿಟ್ಟಿದೆ. ಈ ಬಗ್ಗೆ ವಿಚಾರವಾದಿ, ಚಿಂತಕ ದಿವಂಗತ ಡಾ.ಎಚ್. ನರಸಿಂಹಯ್ಯ ವೈಜ್ಞಾನಿಕವಾಗಿ ಪ್ರಶ್ನಿಸಿ ಬರೆದ ಒಂದು ಬಹಿರಂಗ ಅರ್ಥಗರ್ಭಿತ ಪತ್ರ ಹೀಗಿದೆ. 

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

 

ಪ್ರಿಯ ದಿವಂಗತ ಬೂದುಗುಂಬಳ ಕಾಯಿಗೆ,

 

ನಾನು ತುಂಬಾ ನೊಂದುಕೊಂಡು ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ. ನಿನ್ನೆಯ ದಿನ ಆಯುಧಪೂಜೆ. ನಾನು ಡಿ.ವಿ.ಜಿ. ರಸ್ತೆಯಲ್ಲಿ ಉದ್ದಕ್ಕೆ ನಡೆದುಕೊಂಡು ಒಬ್ಬ ಸ್ನೇಹಿತನ ಮನೆಗೆ ಹೋಗುತ್ತಿದ್ದೆ. ದಾರಿಯುದ್ದಕ್ಕೂ ನಿನ್ನನ್ನು ಅಮಾನುಷವಾಗಿ ಕೊಂದಿರುವ ಹತ್ತಾರು ದಾರುಣ ದೃಶ್ಯವನ್ನು ನೋಡಿ ನನಗೆ ತಡೆಯಲಾರದಷ್ಟು ದುಃಖವಾಯಿತು. ಬಡವರಿಂದ ಮೊದಲ್ಗೊಂಡು ಪಂಚತಾರಾ ಹೋಟೆಲುಗಳ ಅಡುಗೆ ಮನೆಗಳಲ್ಲಿ ಉಳಿದ ದಿನಗಳಲ್ಲಿ ತುಂಬಾ ಪ್ರೀತಿ ಆದರಗಳಿಂದ ನಿನ್ನನ್ನು ಹೆಚ್ಚಿ ಹುಳಿಯನ್ನೋ, ಮಜ್ಜಿಗೆ ಹುಳಿಯನ್ನೋ, ಮಾಡಿ ತಿಂದು ಸಂತೋಷಪಡುತ್ತಾರೆ. ನಿನಗೂ ಅದೇ ಬೇಕಾದದ್ದು, ಮಜ್ಜಿಗೆ ಹುಳಿಯಲ್ಲಿ ನಿನ್ನ ಜೀವನದ ಸಾರ್ಥಕತೆಯನ್ನು ಕಾಣುತ್ತೀಯಾ. ಸಾವಿನಲ್ಲೂ ಸಂತೋಷಪಡುತ್ತೀಯ. ನಿನ್ನಂತಹ ನಿಸ್ವಾರ್ಥ, ನಿಷ್ಕಪಟ ಹುತಾತ್ಮರು ಮನುಷ್ಯರಲ್ಲಿ ಸಿಗುವುದೇ ಅಪರೂಪ.

 

ಅಡುಗೆ ಮನೆಯಲ್ಲಿ ನಿನ್ನನ್ನು ಹಚ್ಚುವುದೇ ಒಂದು ಕಲೆ. ಆದರೆ ಆಯುಧ ಪೂಜೆ ದಿನ ಬೀದಿಯಲ್ಲಿ ಹಾಡು ಹಗಲಿನಲ್ಲಿ ನಿನ್ನನ್ನು ಕೊಲೆ, ಕಗ್ಗೊಲೆ ಮಾಡುತ್ತಾರೆ. ನಿನ್ನನ್ನು ನೆಲದ ಮೇಲೆ ತೆಂಗಿನಕಾಯಿಯನ್ನು ಬಂಡೆಯ ಮೇಲೆ ಈಡುಗಾಯಿ ಒಡೆದಂತೆ ಬಡಿದಾಗ ನಿನ್ನ ಹೋಳುಗಳು ದಿಕ್ಕಾಪಾಲಾಗಿ ಅಸ್ತವ್ಯಸ್ತವಾಗಿ ಬಿದ್ದಿರುವ ದೃಶ್ಯ ಎಂತಹವರ ಮನಸ್ಸನ್ನೂ ಕರಗಿಸುತ್ತದೆ. ಜೊತೆಗೆ ರಕ್ತದ ನೆನಪು ತಂದುಕೊಡಲು ಕೆಂಪು ಬಣ್ಣ ಬೇರೆ. ನಿಜವಾಗಿಯೂ ನಿನ್ನದು ಆಕಾಲ ಹೃದಯ ವಿದ್ರಾವಕ, ಅಪಮೃತ್ಯು. ಇದೆಲ್ಲಾ ಅನುಭವಿಸುವುದು ನಿನ್ನ ಕರ್ಮ ಅಂತ ಕಾಣುತ್ತದೆ. ಹಾಗೇ ಇನ್ನು ನಾಲ್ಕು ಹೆಜ್ಜೆ ಮುಂದೆ ಬಂದೆ. ಗಾಂಧೀ ಬಜಾರ್ ಕಾಲು ಹಾದಿಯಲ್ಲಿ ಬಾಳೆಕಂದು, ಕಂದಮ್ಮಗಳನ್ನು ಕತ್ತರಿಸಿ ಸಾಲಾಗಿ ಮಲಗಿಸಿದ್ದರು. ಇದು ಶಿಶುಹತ್ಯೆ. ಮತ್ತೊಂದು ಹೃದಯ ವಿದ್ರಾವಕ ದೃಶ್ಯ. ಅಸಹಾಯಕರಾದ ಲಕ್ಷಾಂತರ ಕಂದಮ್ಮಗಳನ್ನು ಶೈಶಾವಸ್ಥೆಯಲ್ಲಿಯೇ ಕೊನೆಯುಸಿರು ಎಳೆಯುವಂತೆ ಈ ಕ್ರೂರಿ ಮನುಷ್ಯರು ಮಾಡಿದರು. 

ನಿನ್ನ ಬಗ್ಗೆ ಮೊದಲಿನಿಂದಲೂ ತುಂಬಾ ಅನುಕಂಪ. ನಾನು ಉಪಕುಲಪತಿಯಾಗಿದ್ದಾಗ ನಮ್ಮ ವಿಶ್ವವಿದ್ಯಾಲಯದ ವಾಹನಗಳ ಚಾಲಕರು, ಕಂಡಕ್ಟರ್‌ಗಳು ಒಂದು ದಿನ ನನ್ನ ಆಫೀಸಿಗೆ ಬಂದರು. ʻಏನಪ್ಪಾ ವಿಷಯʼ ಅಂದೆ. ʻನಾಳೆ ಆಯುಧಪೂಜೆ ಸಾರ್ʼ ಅಂದರು. ಎಂತೆಂತಹ ವಿದ್ಯಾವಂತರಿಗೆ, ವಿಜ್ಞಾನಿಗಳಿಗೆ ವೈಜ್ಞಾನಿಕ ಮನೋಭಾವದ ಅಭಾವವಿರುವುದರಿಂದ ಇವರಿಗೆ ವೈಚಾರಿಕ ಮನೋಭಾವವನ್ನು ಭೋಧಿಸುವುದು ಸರಿಯಲ್ಲವೆಂದು ನಾಲ್ಕು ಸೆಕೆಂಡ್ ಯೋಚನೆ ಮಾಡಿ. ‘ಆಯುಧಪೂಜೆ ಮಾಡಿಯಪ್ಪ. ಆದರೆ ನನ್ನದೊಂದು ಸಲಹೆ, ಎಲ್ಲಾ ವಾಹನಗಳನ್ನು ಒಟ್ಟಿಗೆ ನಿಲ್ಲಿಸಿ ಅವುಗಳಿಗೆಲ್ಲಾ ಸೇರಿ ಒಂದೇ ಒಂದು ಬೂದುಗುಂಬಳಕಾಯಿ ಒಡೆಯಿರಿ’ ಎಂದೆ. ಅದಕ್ಕೆ ಅವರು ʻಏನು ಸಾರ್ ಹೀಗಂತೀರಿ. ಒಂದೊಂದು ವಾಹನಕ್ಕೂ ಒಂದೊಂದು ಬೂದುಗುಂಬಳಕಾಯಿ ಒಡದೇ ಆಕ್ಸಿಡೆಂಟ್‌ಗಳು ಕಡಿಮೆ ಆಗಲಿಲ್ಲ. ಅಂದ ಮೇಲೆ ಎಲ್ಲಾ ವಾಹನಗಳಿಗೂ ಸೇರಿ ಒಂದೇ ಒಂದು ಬೂದುಗುಂಬಳ ಕಾಯಿ ಒಡೆದರೆ ನಮ್ಮ ಗತಿ ಏನ್ ಸಾರ್?ʼ ಅಂತ ಹೇಳಿದರು. ಚರ್ಚಿಸಿ ಉಪಯೋಗವಿಲ್ಲವೆಂದು ಸರಿ, ಹಿಂದಿನಂತೆಯೇ ಆಯುಧಪೂಜೆ ಮಾಡಿ ಅಂದೆ. ಒಂದೊಂದು ವಾಹನಕ್ಕೂ ನಿನ್ನ ವಂಶದ ಒಬ್ಬೊಬ್ಬರನ್ನು ಬಲಿ ಕೊಟ್ಟರು. ಆ ಪಾಪದಲ್ಲಿ ನಾನೂ ಭಾಗಿಯಾದೆ.

 

ನಿನ್ನನ್ನು ಹೀಗೆ ಆಯುಧಪೂಜೆ ದಿನ ಬೀದಿಯಲ್ಲಿ ಕೊಲೆ ಮಾಡುವುದರಿಂದ ಅಪಘಾತಗಳು ಕಡಿಮೆ ಆಗುವುದಿಲ್ಲ ಎಂದು ಹಲವು ದಶಕಗಳಿಂದ ಬಡುಕೋತ ಇದ್ದೀನಿ. ಯಾರೂ ಇಲ್ಲಿಯ ತನಕ ಜಗ್ಗಿಯೇ ಇಲ್ಲ. ಈಗಿನ ಶಿಕ್ಷಣ ಪದ್ದತಿಯಿಂದ, ವಿಜ್ಞಾನದ ಬೆಳವಣಿಗೆಯಿಂದ ಇಂತಹ ಅರ್ಥವಿಲ್ಲದ ನಂಬಿಕೆಗಳನ್ನು ಸಾಕಷ್ಟು ಕಡಿಮೆ ಮಾಡಲು ಆಗಿಲ್ಲ. ಹೇಳಿಕೊಳ್ಳುವಂತಹ ಸಮಾಜ ಸುಧಾರಣೆ ಆಗಿಲ್ಲ. ವಿಜ್ಞಾನದ ಪಾಡಿಗೆ ವಿಜ್ಞಾನ. ಮೂಢನಂಬಿಕೆಗಳ ಪಾಡಿಗೆ ಮೂಢನಂಬಿಕೆಗಳು.

 

ನಮ್ಮ ದೇಶದಲ್ಲಿ ಅಸಂಖ್ಯಾತ ದೇವಸ್ಥಾನಗಳು, ಅವ್ಯಾಹತವಾಗಿ ಪೂಜೆ, ಪುಣ್ಯಕ್ಷೇತ್ರಗಳಲ್ಲಿ ಕೋಟ್ಯಾಂತರ ರೂಪಾಯಿಗಳ ಕಾಣಿಕೆ ಅರ್ಥಾತ್ ದೇವರಿಗೆ ಲಂಚ. ಲಕ್ಷಾಂತರ ಮಂದಿ ಗಂಗಾನದಿಯಲ್ಲಿ, ಉಳಿದ ಪುಣ್ಯನದಿಗಳಲ್ಲಿ ಆಗಾಗ ಸ್ನಾನ. ವರ್ಷವೆಲ್ಲಾ ವಾರಕ್ಕೊಂದು ಸಲ ಲಕ್ಷಾಂತರ ಮಂದಿಯಿಂದ ದೂರದರ್ಶನದಲ್ಲಿ ರಾಮಾಯಣ ವೀಕ್ಷಣೆ. ಈಗ ಮಹಾಭಾರತ ಮೊದಲಾಗಿದೆ. ಇವು ಯಾವುವೂ ಜನರ ಮನೋಭಾವವನ್ನು ಸರಿಯಾದ ದಿಕ್ಕಿನಲ್ಲಿ ಕಿಂಚಿತ್ತಾದರೂ ಬದಲಾಯಿಸಿಲ್ಲ. ಮಾಮೂಲಿ ಸ್ವಾರ್ಥ, ಅಪ್ರಾಮಾಣಿಕತೆ, ಸಮಾಜಘಾತಕ ಕೃತ್ಯಗಳು, ಮೋಸ, ದಗಾ ಜೊತೆ ಜೊತೆಯಲ್ಲಿಯೇ ಸಾಗುತ್ತಿವೆ. ನಿತ್ಯಜೀವನದ ಮೇಲೆ ಧರ್ಮವು ಪ್ರಭಾವ ಬೀರಿಲ್ಲ. ವಿಜ್ಞಾನವೂ ಬೀರಿಲ್ಲ. ಧರ್ಮ ಲೇವಾದೇವಿಯಾಗಿದೆ. ವಿಜ್ಞಾನ ಕೇವಲ ಜೀವನೋಪಾಯವಾಗಿದೆ.

ಇಷ್ಟು ದಿನ ಓದಿದವರಲ್ಲಿ ವಿಜ್ಞಾನಿಗಳಲ್ಲಿ ಯಾರಾದರೂ ಒಬ್ಬರು ಹೇಳಲಿ, ಮೊಟ್ಟಮೊದಲನೆಯದಾಗಿ ಯಾವುದೇ ಬಲಿಯಿಂದ ಏನು ಪ್ರಯೋಜನ? ಪ್ರಯೋಜನವಿದ್ದರೆ ನಿನ್ನನ್ನೇ ಏಕೆ ಬಲಿ ಕೊಡಬೇಕು? ಇದನ್ನು ಸಮಂಜಸವಾಗಿ ಉತ್ತರಿಸುವ ಭೂಪ ಇನ್ನೂ ಹುಟ್ಟಿಲ್ಲ. ನಿನಗೆ ಆಗದವನು ಯಾವನೋ ನಿನ್ನನ್ನು ಮೊದಲು ಬಲಿ ಕೊಟ್ಟ ಸರಿ. ಅಲ್ಲಿಂದ ಮೊದಲಾಯಿತು ಈ ಅಸಂಖ್ಯಾತ ವಾರ್ಷಿಕ ಭೀಕರ ಕೊಲೆಗಳು.

 

ನಿನ್ನನ್ನು ಹೀಗೆ ಅಮಾನುಷವಾಗಿ ಕೊಲೆ ಮಾಡುವುದನ್ನು ಸ್ನೇಹಿತರೊಂದಿಗೆ ಖಂಡಿಸುತ್ತಿದ್ದೆ. ಭಾಷಣಗಳಲ್ಲೂ ಅದೇ ಕೆಲಸ ಮಾಡುತ್ತಿದ್ದೆ. ಈ ಸಲವಂತೂ ನೀನು ಮತ್ತು ನಿನ್ನ ವಂಶದ ಹಲವಾರು ಬೀದಿಯಲ್ಲಿ ಕೊಲೆಗೀಡಾದ ಅಸ್ತವ್ಯಸ್ತವಾಗಿ ಬಿದ್ದಿರುವುದನ್ನು ನೋಡಿ ದುಃಖ ತಡೆಯಲಾರದೇ ನಿನಗೆ ಈ ಕಾಗದವನ್ನು ಬರೆದಿದ್ದೇನೆ. ನೀನು ಓದಲು ಆಗದೇ ಇರಬಹುದು. ಆದರೆ ನಿನಗೆ ಬರೆದ ಪತ್ರವನ್ನು ಬಹಿರಂಗಪಡಿಸುವುದರಿಂದ ನಿನ್ನ ಕೊಲೆಪಾತಕರಾದರೂ ಇದನ್ನೂ ಓದಿ ನಿನ್ನನ್ನು ಇಂತಹ ದುರ್ಗತಿಗೆ ಈಡು ಮಾಡದೇ ಹೋಗಲಿ ಎಂದು ಬರೆದಿದ್ದೇನೆ. ನಾನು ಇಷ್ಟು ಮಾತ್ರ ನಿನಗೆ ಆಶ್ವಾಸನೆ ಕೊಡುತ್ತೇನೆ. ನಿನ್ನನ್ನು ಕೊಲೆಗೀಡು ಮಾಡುತ್ತಿರುವಂತಹ ಅಸಂಖ್ಯಾತ ಮೂಢನಂಬಿಕೆಗಳ, ಅರ್ಥವಿಲ್ಲದ ಸಂಪ್ರದಾಯಗಳ ವಿರುದ್ಧ ಒಬ್ಬನೇ ಆದರೂ ಚಿಂತೆ ಇಲ್ಲ, ಎದೆಗುಂದದೆ ಕೊನೆಯತನಕ ಹೋರಾಡುತ್ತಲೇ ಇರುತ್ತೇನೆ.

ಬದುಕಿರುವಾಗ ದೇಹಕ್ಕೆ ಮನಸ್ಸಿಗೆ ಸಾಕಷ್ಟು ಕಷ್ಟಕೊಟ್ಟು ಸತ್ತಾಗ ಆತ್ಮಕ್ಕೆ ಆಂತಿ ಸಿಗಲಿ ಎಂದು ಕೋರುವ ಜನ ನಾವು. ನಿನ್ನ ದೇಹಕ್ಕೆ ಮತ್ತು ಮನಸ್ಸಿಗೆ ಅಸಾಧ್ಯ ನೋವಾಗಿದೆ ಎಂದು ನನಗೆ ಚೆನ್ನಾಗಿ ಗೊತ್ತು. ಗೊತ್ತಿಲ್ಲದ ಆತ್ಮದ ಬಗ್ಗೆ ನಾನು ಏನನ್ನೂ ಹೇಳಲೂ ಇಚ್ಚಿಸುವುದಿಲ್ಲ.

 

ಇಂತಿ,

-ಹೆಚ್‌ ನರಸಿಂಹಯ್ಯ

Tags: #saakshatvH narasimhalife storymarjala manthanaPumpkinspecial article
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram