ನಟ ನಾಗಚೈತನ್ಯ (Nagachaitanya) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಅಲ್ಲದೇ, ಮದುವೆ ಹೆಣ್ಣಿನ ಮನೆಯಲ್ಲಿ ಮದುವೆ (Wedding) ಶಾಸ್ತ್ರ ಆರಂಭವಾಗಿದೆ.
ಈ ವೇಳೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ನಾಗಚೈತನ್ಯ ಭಾವಿ ಪತ್ನಿ ಶೋಭಿತಾ ಅವರು ಈ ಸಂಭ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಾಗಚೈತನ್ಯ ಅಭಿಮಾನಿಗಳಿಗೆ 2ನೇ ಮದುವೆಯ ದಿನಾಂಕ ಹೇಳದೆ, ಈಗ ಗುಟ್ಟಾಗ ಶಾಸ್ತ್ರ ಆರಂಭಿಸಿದ್ದಾರೆ. ಹೆಣ್ಣಿನ ಮನೆಯಲ್ಲಿ ಮದುವೆ ಶಾಸ್ತ್ರ ಶುರುವಾಗಿದ್ದು, ಕೆಂಪು ಬಣ್ಣದ ಸೀರೆಯುಟ್ಟು ನಗುತ್ತಾ ಅರಿಶಿಣವನ್ನು ಕಟ್ಟುವ ಶಾಸ್ತ್ರದಲ್ಲಿ ಶೋಭಿತಾ (Sobhita Dhuliapala) ಕಾಣಿಸಿಕೊಂಡಿದ್ದಾರೆ. ಆದರೂ ಮದುವೆ ಎಲ್ಲಿ ನಡೆಯುತ್ತದೆ? ಯಾವಾಗ ನಡೆಯುತ್ತದೆ ಎಂಬುವುದು ಮಾತ್ರ ಬಹಿರಂಗವಾಗಿಲ್ಲ.
ಇತ್ತೀಚೆಗಷ್ಟೇ ನಾಗಚೈತನ್ಯ ಅವರು ಶೋಭಿತಾ ಜೊತೆ ತಮ್ಮ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2017ರಲ್ಲಿ ಸ್ಟಾರ್ ನಟಿ ಸಮಂತಾ ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಆದರೆ 2021ರಲ್ಲಿ ಇಬ್ಬರೂ ಬೇರೆ ಬೇರೆಯಾಗಿದ್ದರು.