ರಾಜ್ಯದಲ್ಲಿ ಮಾಸ್ಕ ಕಡ್ಡಾಯ | ನಿಯಮ ಮೀರಿದಲ್ಲಿ 500ರೂ ದಂಡ
ತಮಿಳನಾಡು: ದೇಶದ ಕೆಲವು ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ತಮಿಳುನಾಡಿನಲ್ಲಿ ಮಾಸ್ಕ ಕಡ್ಡಾಯಗೊಳಿಸಿದ್ದಾರೆ.
ತಮಿಳನಾಡಿನಲ್ಲಿ ಕೊರೊನಾ ಹೆಚ್ಚುತ್ತಿರುವ ಕಾರಣ ಮಾಸ್ಕ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಪಾಲಿಸದಿದ್ದರೆ 500ರೂ ದಂಡ ವಿಧಿಸಲಾಗುವುದು ಎಂದು ಸರಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನರು ಕೊರೊನಾ ಪ್ರೋಟೊಕಾಲ್ ಗಳನ್ನು ಅನುಸರಿಸುವಲ್ಲಿ ತೋರುತ್ತಿರುವ ಸಡಿಲತೆಯ ಹಿನ್ನಲೆಯಲ್ಲಿ ಸಾರ್ವಜನಿಕರಿಂದ 500 ರೂ ದಂಡವನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮುಖಕ್ಕೆ ಮಾಸ್ಕ್ ಧರಿಸದ ಸಾರ್ವಜನಿಕರಿಂದ ದಂಡ ವಸೂಲಿ ಮಾಡುವಂತೆ ಸ್ಥಳೀಯ ಆಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಎಂದು ಸುದ್ದಿಗಾರರಿಗೆ ತಿಳಿಸಿದರರು.