ಬೆಂಗಳೂರು : ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಸ್ಕ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಇಂದು ಬೆಳಿಗ್ಗೆ ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಜಾಥ ನಡೆಸಲಾಯಿತು. ಆ ಮೂಲಕ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಮೌಲ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದ ಜನ ಆತಂಕದಲ್ಲಿ ಇದ್ದಾರೆ. ಹಾಗಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಜೊತೆ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಜಾಗೃತಿ ಕಾರ್ತಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಂದಾಯ ಸಚಿವ ಆರ್ ಅಶೋಕ್, ಸಂಸದ ಪಿ ಸಿ ಮೋಹನ್ ಹಾಗೂ ತೇಜಸ್ವಿ ಸೂರ್ಯ, ಖ್ಯಾತ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಚಿತ್ರನಟ ಪುನೀತ್ ರಾಜ್ ಕುಮಾರ್, ನಟಿ ರಾಗಿಣಿ ದ್ವಿವೇದಿ ಮೊದಲಾದವರು ವಿಧಾನಸೌಧದದಿಂದ ಕಬ್ಬನ್ ಪಾರ್ಕ್ ವರೆಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು.