‘ಬೇಸಿಗೆ ಶಿಬಿರಗಳಲ್ಲಿ ಮಕ್ಕಳಿಗೆ ಮಾಸ್ಕ್ ಅಗತ್ಯ ಇಲ್ಲ’: ಅಮೆರಿಕ
ಬೇಸಿಗೆ ಶಿಬಿರಗಳಲ್ಲಿ ( ಸಮರ್ ಕ್ಯಾಂಪ್) ಪಾಲ್ಗೊಳ್ಳುವ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದೇನೂ ಇಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ(ಸಿಡಿಸಿ) ತಿಳಿಸಿದೆ.
ಮಾಸ್ಕ್ ಕುರಿತ ನಿಯಮಗಳನ್ನು ಸಡಿಲಿಸಿ ‘ಸಿಡಿಸಿ’ ಮಾಗರ್ಸೂಚಿ ಬಿಡುಗಡೆ ಮಾಡಿದೆ. ಸಂಪೂರ್ಣವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವ ಮಕ್ಕಳು ಹೊರಾಂಗಣ ಮತ್ತು ಒಳಾಂಗಣದಲ್ಲಿ ಮಾಸ್ಕ್ ಧರಿಸದೇ ಇರಬಹುದು ಎಂದು ತಿಳಿಸಿದೆ.
ಆದರೆ ಇನ್ನೂ ಲಸಿಕೆ ಪಡೆಯದ ಮಕ್ಕಳು ಎಲ್ಲೆಡೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ. ಮಾಸ್ಕ್ ಕುರಿತ ನಿಯಮಗಳನ್ನು ಇತ್ತೀಚೆಗೆ ಸಿಡಿಸಿ ಸಡಿಲಿಸಿತ್ತು. ಲಸಿಕೆ ಪಡೆದವರು ಮಾಸ್ಕ್ ಧರಿಸುವ ಕುರಿತು ಹೆಚ್ಚು ಗಮನ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿತ್ತು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.