36 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಕೆಲಸ ಮುಗಿಸಿಕೊಂಡು ಆಟೋದಲ್ಲಿ ಮನೆಗೆ ತೆರಳುತ್ತಿದ್ದ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯ ಗಾಜಿಪುರ ಮುರಗ ಮಂಡಿ ಬಳಿ ನಡೆದಿದೆ.
36 ವರ್ಷದ ಮಹಿಳೆ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ನಡೆದಿದ್ದು ಏನು? ಬುಧವಾರ ರಾತ್ರಿ ಮಹಿಳೆ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಮನೆಗೆ ಆಟೋದಲ್ಲಿ ಮರಳುತ್ತಿದ್ದರು. ಆಟೋ ಗಾಜಿಪುರ ಮುರಗ ಮಂಡಿ ಬಳಿ ಬಂದಾಗ ಚಾಲಕ ಆಟೋದಲ್ಲಿ ಪೆಟ್ರೋಲ್ ಮುಗಿದಿದೆ ಎಂದು ಹೇಳಿದ್ದಾನೆ. ನಂತರ ತನ್ನ ಸ್ನೇಹಿತನಿಗೆ ಕರೆ ಮಾಡಿ ಕರೆದಿದ್ದಾನೆ.
ನಂತರ ಇಬ್ಬರೂ ಸೇರಿ ಮಹಿಳೆಯನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ತೀರ್ವ ರಕ್ತಸ್ರಾವದಿಂದ ನರಳುತ್ತಿದ್ದ ಮಹಿಳೆಯನ್ನು ಗುರುವಾರ ಬೆಳಿಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕೂಡಲೇ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಮಹಿಳೆ ಆರೋಗ್ಯ ಸ್ಥಿರವಾಗಿದೆ.
ಈ ಕುರಿತು ಮಾತನಾಡಿದ ಡಿಸಿಪಿ ಪ್ರಿಯಾಂಕಾ ಕಶ್ಯಪ್ ಘಟನೆ ಸಂಭಂದ ತನಿಕೆ ಆರಂಭಿಸಲಾಗಿದೆ. ಇದಕ್ಕಾಗಿ ವಿಶೇಷ ತಂಡವನ್ನು ನಿರ್ಮಿಸಲಾಗಿದೆ. ಅಲ್ಲದೇ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಲಾಗುವುದೆಂದು ಪ್ರಕರಣದ ತನಿಖಾಧಿಕಾರಿ ಡಿಸಿಪಿ ಹೇಳಿದ್ದಾರೆ.