ಕೇರಳ : ವೃದ್ಧೆಯ ಮೇಲೆ ಮೂವರು ಕೂಲಿ ಕಾರ್ಮಿಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಭಾನುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ್ದ ದುಷ್ಟರು, ವೃದ್ಧೆ ಮೇಲೆ ದುಷ್ಕೃತ್ಯವೆಸಗಿ ತದನಂತರ ಆಕೆಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಕುಟುಂಬಸ್ಥರು ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ವೃದ್ಧೆಯನ್ನು MOSC ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದ್ದು, ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು ಮದ್ಯಸೇವನೆ ಮಾಡಿ ಈ ಕೃತ್ಯವೆಸಗಿದ್ದಾರೆ. ಬಳಿಕ ಆಕೆಯ ಮನೆ ಕಳ್ಳತನ ಮಾಡಿರುವುದು ಗೊತ್ತಾಗಿದೆ.