ನವದೆಹಲಿ: ನಗರದ ರೋಹಿಣಿಯಲ್ಲಿರುವ ಸಿಆರ್ ಪಿಎಫ್ ಶಾಲೆಯ ಹತ್ತಿರ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ.
ಸ್ಫೋಟದಿಂದ ಶಾಲೆಯ ಗೋಡೆಗೆ ಹಾನಿಯಾಗಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫೊರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಕ್ಕೆ ಕಾರಣವನ್ನು ಪತ್ತೆ ಹಚ್ಚುವ ಕಾರಯ್ ಮಾಡಲಾಗುತ್ತಿದೆ.
ಸ್ಥಳೀಯ ನಿವಾಸಿಯೊಬ್ಬರು ರೆಕಾರ್ಡ್ ಮಾಡಿದ ವೀಡಿಯೋದಲ್ಲಿ, ಸ್ಫೋಟದ ಸ್ಥಳದ ಸಮೀಪದಿಂದ ಹೊಗೆ ಕಂಡು ಬಂದಿದೆ. ಪೊಲೀಸ್ ತಂಡ ಮತ್ತು ಅಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಪ್ರಶಾಂತ್ ವಿಹಾರ್ನಲ್ಲಿರುವ ಸಿಆರ್ಪಿಎಫ್ ಶಾಲೆಯ ಬಳಿ ಬೆಳಗ್ಗೆ 7:47ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ, ಸ್ಪೋಟದ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಫೋಟದ ತೀವ್ರತೆಗೆ ಶಾಲೆಯ ಬಳಿ ನಿಲ್ಲಿಸಿದ್ದ ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ. ಆ ಪ್ರದೇಶದಲ್ಲಿನ ಅಂಗಡಿಗಳ ಸೂಚನಾ ಫಲಕಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.








