ಪ್ರಯಾಗ್‌ರಾಜ್: ಐತಿಹಾಸಿಕ ಮಹಾ ಕುಂಭ ಮೇಳದ (Maha Kumbh Mela) ಟೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಸಿಲಿಂಡರ್ ಸ್ಫೋಟಗೊಂಡ (Cylinder Blast) ಕೆಲವೇ ಕ್ಷಣದಲ್ಲಿ ಅಕ್ಕಪಕ್ಕದ ಡೇರೆಗಳಿಗೂ ಅಗ್ನಿ ಜ್ವಾಲೆ ಹರಡಿದೆ. ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2 ಸಿಲಿಂಡರ್ ಸ್ಫೋಟದಿಂದ ಅಗ್ನಿ ಅವಘಡ (Prayagraj Fire) ಸಂಭವಿಸಿದೆ. ಹಲವು ಟೆಂಟ್ ಗಳು ಸುಟ್ಟು ಭಸ್ಮವಾಗಿವೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.








