ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ನಡೆದಿದ್ದು, ಅಪಾರ ಪ್ರಮಾಣದ ವಸ್ತುಗಳು ಆಹುತಿಯಾಗಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯ ಟಿಆರ್ ಮೀಲ್ ಹತ್ತಿರ ಟಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಎಲ್ಲವೂ ಹೊತ್ತಿ ಉರಿದಿವೆ. ಕೂಡಲೇ ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಬೆಳಿಗ್ಗೆ 4:30ರ ಹೊತ್ತಿಗೆ ನಡೆದಿದೆ. ಬೆಳಿಗ್ಗೆ ಸುಮಾರು 5.30ರ ವೇಳೆಗೆ ಪೊಲೀಸರು ಎಲ್ಲರೂ ಹೊರಗಡೆ ಬರುವಂತೆ ಅನೌನ್ಸ್ ಮಾಡಿ ಅಕ್ಕಪಕ್ಕದ ಮನೆಯ ಜನರನ್ನು ಎಚ್ಚರಿಸಿದ್ದಾರೆ. ಬೆಂಕಿ ಹೊತ್ತಿದ ಪ್ರದೇಶದಲ್ಲಿನ ಸುಮಾರು 20ಕ್ಕೂ ಅದಿಕ ಮನೆಗಳನ್ನು ಖಾಲಿ ಮಾಡಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಬೆಂಕಿ ತಗಲಿದ್ದ ಕಟ್ಟಡದಲ್ಲಿ ಸುಮಾರು 8 ಟಯರ್ ಗಳು ಇದ್ದು ಎಲ್ಲವೂ ಹೊತ್ತಿ ಉರಿಯುತ್ತಿವೆ.3 ಗಂಟೆಗೆ ಘಟನೆ ನಡೆದರೂ ಅಗ್ನಿಶಾಮಕ ಕಂಟ್ರೋಲ್ ರೂಮ್ ಗೆ ಕರೆ ಮಾಡಿದರೂ ಪಿಕ್ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸುಮಾರು ಹತ್ತಕ್ಕೂ ಅಧಿಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ, ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.