ಸರ್ಕಾರದ ವಿರುದ್ಧ ನಾಳೆ ಖಾಸಗಿ ಶಾಲೆಗಳಿಂದ ಬೃಹತ್ ಪ್ರತಿಭಟನೆ
ಬೆಂಗಳೂರು : ಶುಲ್ಕ ಕಡಿತ ಆದೇಶ ವಾಪಾಸ್ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಖಾಸಗಿ ಶಾಲೆಗಳ ಒತ್ತಾಯಿಸಿದ್ರೂ ಸರ್ಕಾರ ಮಾತ್ರ ಕ್ಯಾರೇ ಅಂತಿಲ್ಲ. ಹೀಗಾಗಿ ಸರ್ಕಾರ & ಶಿಕ್ಷಣ ಇಲಾಖೆ ವಿರುದ್ಧ ಖಾಸಗಿ ಶಾಲೆಗಳು ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ.
ಖಾಸಗಿ ಶಾಲಾ ಒಕ್ಕೂಟಗಳು ನಾಳೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ತೀರ್ಮಾನಿಸಿವೆ. ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾ ನಡೆಸಲು ನಿರ್ಧರಿಸಿದ್ದು ಆ ಬಳಿಕ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಕ್ಯಾಮ್ಸ್, ಕುಸುಮಾ, ಮಿಕ್ಸಾ, ಮಾಸ್ 11 ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಈ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಲಿದ್ದು, 25 ಸಾವಿರಕ್ಕೂ ಅಧಿಕ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರಿಡಂಪಾರ್ಕ್ ಗೆ ರ್ಯಾಲಿ ನಡೆದ ಬಳಿಕ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ರೂಪ್ಸಾ ಹೊರತುಪಡಿಸಿ ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿವೆ. ಈ ಕಾರಣ ನಾಳೆ ಒಂದು ದಿನ ರಾಜ್ಯಾದ್ಯಂತ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ಸ್ಥಗಿತವಾಗಲಿವೆ.
ಖಾಸಗಿ ಶಾಲೆಗಳ ಬೇಡಿಕೆಗಳೇನು..?
1. ರಾಜ್ಯ ಸರ್ಕಾರ ಆದೇಶ ಮಾಡಿರೋ ಶೇ.30 ರಷ್ಟು ಶುಲ್ಕ ಕಡಿತದ ಆದೇಶವನ್ನ ಪುನರ್ ಪರಿಶೀಲನೆ ಮಾಡಬೇಕು
2. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಿ
3. ಕಟ್ಟಡ ಸುರಕ್ಷಿತ ಪ್ರಮಾಣ ಪತ್ರ ಹಿಂದಿನ ಶಾಲೆಗಳಿಗೆ ಕೈ ಬಿಡುವಂತೆ ಒತ್ತಾಯ
4. 1 ರಿಂದ 5 ನೇ ತರಗತಿಗಳನ್ನ ಆರಂಭ ಮಾಡಬೇಕು
5. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು