ಬೆಂಗಳೂರು: ಇಲ್ಲಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA)ಲ್ಲಿ 3.5 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿರುವ ಘಟನೆಯೊಂದು ನಡೆದಿದೆ.
ಈ ಕುರಿತು ಏರ್‌ಪೋರ್ಟ್ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಗೋದ್ರೇಜ್ ಹಾಗೂ ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್ಗೆ ಸಂಬಂಧಿಸಿದ ಸಾಮಗ್ರಿಗಳನ್ನೇ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ (ನವೆಂಬರ್ 11) ರಂದು ದೂರು ನೀಡಿದ್ದಾರೆ.
ವಿಮಾನ ನಿಲ್ದಾಣದ ಕಾಮಗಾರಿ 2020ರಿಂದ ಆರಂಭವಾಗಿದ್ದು, ಡಿಸೆಂಬರ್ 2022 ರಿಂದ ಆವರಣದೊಳಗೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ ವಸ್ತುಗಳು ನಾಪತ್ತೆಯಾಗಿರುವುದು ಗೊತ್ತಾಗಿದೆ.