ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ನಿಯಂತ್ರಣ ಮಾಡಲು ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್

admin by admin
June 23, 2020
in Newsbeat, Saaksha Special, Samagra karnataka, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ನಿಯಂತ್ರಣ ಮಾಡಲು ಲಾಕ್ ಡೌನ್ ಮತ್ತು ಸೀಲ್ ಡೌನ್ ಅಸ್ತ್ರ ಪ್ರಯೋಗ ಮಾಡಿತ್ತು. ಇದೀಗ ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ತಾತ್ಕಾಲಿವಾಗಿ ಹೆಚ್ಚುವರಿ ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಬಿಬಿಎಂಪಿ ಮಾಡಿದೆ.

ಅಲ್ಲದೆ ಸ್ವಾಬ್ ಪರೀಕ್ಷೆ ನಡೆಸಲು, ಸ್ವಾಬ್ ಮಾದರಿಯನ್ನು ಸಂಬಂಧಪಟ್ಟ ಪ್ರಯೋಗಾಲಯಗಳಿಗೆ ರವಾನಿಸಲು, ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡುವ ಸಲುವಾಗಿ ವಾಹನ ವ್ಯಸಸ್ಥೆ ಕಲ್ಪಿಸಲಾಗುತ್ತಿದೆ. ಕೋವಿಡ್-19 ಪಾಸಿಟಿಟ್ ಸೋಂಕಿತ ವ್ಯಕ್ತಿಗಳನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ರವಾನಿಸಲು ಆಂಬ್ಯಲೆನ್ಸ್ ವ್ಯವಸ್ಥೆ ಕಲ್ಪಿಸಲು ಪಾಲಿಕೆ ಕೇಂದ್ರ ಕಛೇರಿ ಅನೆಕ್ಸ್ ಕಟ್ಟಡ-03ರಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

Related posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

June 19, 2025
ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

June 19, 2025

50 ಆಂಬ್ಯುಲೆನ್ಸ್ ಗಳ ವ್ಯವಸ್ಥೆ:

ಬಿಬಿಎಂಪಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು 50 ಆಂಬ್ಯುಲೆನ್ಸ್ ಗಳನ್ನು ನಿಯೋಜನೆ ಮಾಡಿದೆ. ಅದರಂತೆ 6 ಆಂಬ್ಯುಲೆನ್ಸ್ ಗಳು ಬೆಂಗಳೂರು ನಗರ, 4 ಆಂಬ್ಯುಲೆನ್ಸ್ ಗಳು ಬೆಂಗಳೂರು ಗ್ರಾಮಾಂತರ, ಪಾಲಿಕೆ 8 ವಲಯಗಳಿಗೆ 38 ಆಂಬ್ಯುಲೆನ್ಸ್ ಗಳು ಹಾಗೂ ಹೆಚ್ಚುವರಿಯಾಗಿ 2 ಆಂಬ್ಯುಲೆನ್ಸ್ ಗಳು ಪಾಲಿಕೆ ಕೇಂದ್ರ ಕಛೇರಿಗೆ ನಿಯೋಜನೆ ಮಾಡಿಕೊಂಡಿದೆ.

ಪಾಲಿಕೆ ಕೇಂದ್ರ ಕಛೇರಿಯಲ್ಲಿರುವ 2 ಆಂಬ್ಯುಲೆನ್ಸ್ ಮುಖ್ಯ ಆರೋಗ್ಯಾಧಿಕಾರಿ ಸಪುರ್ದಿಯಲ್ಲಿರುತ್ತದೆ. ಪಾಲಿಕೆ ವಲಯಗಳಿಗೆ ನಿಯೋಜಿಸಿರುವ 38 ಆಂಬ್ಯುಲೆನ್ಸ್ ಗಳು ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳ ಸುಪರ್ದಿಯಲ್ಲಿರುತ್ತವೆ. ಕೋವಿಡ್-19 ಸೋಂಕಿತರನ್ನು ಕರೆದೊಯ್ಯಲು ನಿಯೋಜನೆ ಮಾಡಿರುವ ಆಂಬ್ಯುಲೆನ್ಸ್ ಗಳಿಗೆ ಜಿಪಿಎಸ್ ಅಳವಡಿಸಿ ಅದರ ಮೇಲೆ ನಿಗಾವಹಿಸಲು ಕ್ರಮವಹಿಸಲಾಗುತ್ತದೆ.

ನಿಯಂತ್ರಣ ಕೊಠಡಿ ಸ್ಥಾಪನೆ:

ಕೋವಿಡ್-19 ಪಾಸಿಟಿವ್ ಸೋಂಕಿತರನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ಪಾಲಿಕೆ ಕೇಂದ್ರ ಕಛೇರಿ ಅನೆಕ್ಸ್ ಕಟ್ಟಡ-03ರಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಸಂಬಂಧಪಟ್ಟ ವ್ಯಕ್ತಿಗಳು ವಲಯ ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ಕೋವಿಡ್-19 ಪಾಸಿಟಿವ್ ಬಂದಿರುವ ಬಗ್ಗೆ ಮಾಹತಿ ನೀಡಿದರೆ, ಆ ಬಗ್ಗೆ ವಲಯ ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೂಡಲೆ ಆಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಿದ್ದಾರೆ.

ಟೆಂಪೋ ಟ್ರಾವೆಲ್ ವ್ಯವಸ್ಥೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಕಂಡುಬಂದ ಬಳಿಕ ಪ್ರಥಮ ಸಂಪರ್ಕಿತರು ಹಾಗೂ ದ್ವಿತೀಯ ಸಂಪರ್ಕಿತರ ಸ್ವಾಬ್ ಸಂಗ್ರಹಕ್ಕಾಗಿ ಪಾಲಿಕೆಯ 8 ವಲಯಗಳಿಗೆ ತಲಾ ಒಂದೊಂದು ವಾಹನ, ಬೆಂಗಳೂರು ನಗರಕ್ಕೆ 5 ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ 4 ವಾಹನಗಳು ಸೇರಿ ಒಟ್ಟು 17 ವಾಹನಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೆ Influenza Like Illness(ILI), severe acute respiratory infection(SARI) ಸೋಂಕಿತರ ಸ್ವಾಬ್ ಸಂಗ್ರಹಕ್ಕಾಗಿ ಪ್ರತ್ಯೇಕವಾಗಿ 5 ವಾಹನಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿರುತ್ತದೆ.

ಶ್ರದ್ಧಾಂಜಲಿ ವಾಹನ:

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳನ್ನು ಸಾಗಿಸಲು ಪಾಲಿಕೆಯ 8 ವಲಯಗಳಿಗೆ ಒಂದೊಂದು “ಶ್ರದ್ದಾಂಜಲಿ ವಾಹನ”ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಕೋವಿಡ್-19 ಸೋಂಕಿತರು ಮೃತರಾದರೆ ಆ ಆಸ್ಪತ್ರೆಗೆ ಶ್ರದ್ಧಾಂಜಲಿ ವಾಹನ ತೆರಳಿ ಮೃತ ವ್ಯಕ್ತಿಯನ್ನು ನಿಗದಿತ ಚಿತಾಗಾರಕ್ಕೆ ಕೊಂಡೊಯ್ಯುವ ವ್ಯವಸ್ಥೆö ಕಲ್ಪಿಸಲಾಗುತ್ತಿದೆ.

ಸೋಂಕುಶಾಸ್ತ್ರಜ್ಞರ(Epidemiologists) ನಿಯೋಜನೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 8 ಮಂದಿ ಸೋಂಕುಶಾಸ್ತ್ರಜ್ಞರನ್ನು ನಿಯೋಜನೆ ಮಾಡಿಕೊಳ್ಳಲಾಗಿದ್ದು, ಕೋವಿಡ್-19 ಪ್ರಕರಣ ಕಂಡುಬಂದ ಸೋಂಕಿತ ವ್ಯಕ್ತಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕ ಪತ್ತೆ ಹಚ್ಚುವ ಕಾರ್ಯ ನಿರ್ವಹಿಸಲಿದ್ದಾರೆ.

ಪ್ರತ್ಯೇಕ ಆಸ್ಪತ್ರೆಗಳು ನಿಗದಿ:

ಕೋವಿಡ್-19 ಚಿಕಿತ್ಸೆಗಾಗಿ ಮೂರು ಆಸ್ಪತ್ರೆಗಳನ್ನು ಮೀಸಲಿಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆ, ಬೋರಿಂಗ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಅದಲ್ಲದೆ 8 ಆಸ್ಪತ್ರೆಗಳಾದ ಕಮಾಂಡ್ ಆಸ್ಪತ್ರೆ, ಲೆಪ್ರೆಸಿ ಆಸ್ಪತ್ರೆ(ಮಾಗಡಿ ರಸ್ತೆ), ಇಡಿ ಆಸ್ಪತ್ರೆ, ಇ.ಎಸ್.ಐ ಆಸ್ಪತ್ರೆ(ಇಂದಿರಾನಗರ, ರಾಜಾಜಿನಗರ, ಪೀಣ್ಯ). ಸಿ.ವಿ.ರಾಮನ್ ನಗರ ಜನರಲ್ ಆಸ್ಪತ್ರೆ ಹಾಗೂ ಜಯನಗರ ಜನರಲ್ ಆಸ್ಪತ್ರೆಗಳನ್ನು ಕೋವಿಡ್-19 ಆರೋಗ್ಯ ಕೇಂದ್ರಗಳನ್ನಾಗಿಸಲಾಗಿದೆ. ಜೊತೆಗೆ ಹಜ್ ಭವನವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದೆ.

ಮೊಬೈಲ್ ಸ್ಯಾಂಪಲ್ ಕಲೆಕ್ಷನ್ ವೆಹಿಕಲ್:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೊಲೀಸ್ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ ಸಿಬ್ಬಂದಿ, ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳು, ಹೋಟೆಲ್ ಸಿಬ್ಬಂದಿ, ಸ್ವಿಗ್ಗಿ ಬಾಯ್ಸ್ ಸೇರಿದಂತೆ ಇನ್ನಿತರರ ಸ್ವಾಬ್ ಸಂಗ್ರಹಕ್ಕಾಗಿ 1 ಮೊಬೈಲ್ ಸ್ಯಾಂಪಲ್ ವೆಹಿಕಲ್ ಅನ್ನು 3 ದಿನದೊಳಗಾಗಿ ನಿಯೋಜನೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ

Tags: Corona
ShareTweetSendShare
Join us on:

Related Posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

by Shwetha
June 19, 2025
0

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮತ್ತು ಅಮುಲ್ ಹಾಲು ಉತ್ಪನ್ನಗಳ ಕಿಯಾಸ್ಕ್‌ಗಳನ್ನು ಸ್ಥಾಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬಳಿಕ, ಈ ವಿಚಾರವು ಚರ್ಚೆಗೆ ಕಾರಣವಾಗಿದೆ. ಈ...

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

by Shwetha
June 19, 2025
0

ರಾಜ್ಯದ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮ (ನಂದಿ ಬೆಟ್ಟ)ದಲ್ಲಿ ಇಂದು ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ, ಅಚ್ಚರಿಯ ತಿರುವು ಪಡೆದು ಕೊನೆ ಕ್ಷಣದಲ್ಲಿ ರದ್ದಾಗಿದೆ. ಮುಖ್ಯಮಂತ್ರಿ...

ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ವಿದ್ಯುತ್ ಸಫಾರಿ ಬಸ್ ಚಾಲನೆ: ಶೀಘ್ರದಲ್ಲೇ 10 ವಿದೇಶೀ ವನ್ಯಜೀವಿಗಳ ಆಗಮನ

by Shwetha
June 19, 2025
0

ಬೆಂಗಳೂರು ಹೊರವಲಯದ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನವು ಮತ್ತೊಂದು ಮುನ್ನಡೆಯ ಹಂತ ತಲುಪಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಲ್ಲಿಗೆ ವಿದ್ಯುತ್ ಚಾಲಿತ ಸಫಾರಿ ಬಸ್‌ ಪರಿಚಯಗೊಂಡಿದೆ. ಈ...

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram