ಉತ್ತರಪ್ರದೇಶ: ಹೆರಿಗೆಗೆಂದು ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಕಾರಣ ಮಹಿಳೆಗೆ ಆಸ್ಪತ್ರೆಯ ಬಯಲಲ್ಲಿಯೇ ಹೆರಿಗೆಯಾದ ಘಟನೆ ಉತ್ತರಪ್ರದೇಶದ ಬಹರಾಯಿಚ್ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಕೂಡಲೆ ಮಹಿಳೆಯನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಗೆ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಸಂಬಂಧಿಕರು ಆಗ್ರಹಿಸಿದರೂ ವೈದ್ಯರು ದಾಖಲಿಸಿಕೊಳ್ಳಲಿಲ್ಲ. ಹೆರಿಗೆ ನೋವಿನಿಂದ ನರಳುತ್ತಿದ್ದರೂ ವೈದ್ಯರಾಗಲೀ, ಸಿಬ್ಬಂದಿಯಾಗಲೀ ಉಪಚರಿಸಲಿಲ್ಲ. ಪರಿಣಾಮ ಆಸ್ಪತ್ರೆಯ ಬಯಲಲ್ಲಿಯೇ ಮಹಿಳೆಗೆ ಹೆರಿಗೆಯಾಗಿದೆ. ಹೆರಿಗೆ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ರಗ್ಗನ್ನೇ ಸುತ್ತ ಪರದೆಯನ್ನಾಗಿ ಮಾಡಿಕೊಂಡಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








