ಬಳ್ಳಾರಿ: ಗಣಿನಾಡು ಬಳ್ಳಾರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೊಂಕಿತರಾಗಿ ಚಿಕಿತ್ಸೆಗೆ ದಾಖಲಾಗಿದ್ದ ಮೂವರು ಗರ್ಭಿಣಿಯರಿಗೆ ಸುಸೂತ್ರ ಹೆರಿಗೆ ಮಾಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದು, ತಾಯಿ ಮತ್ತು ಮಕ್ಕಳು ಕ್ಷೇಮವಾಗಿದ್ದಾರೆ.
ಒಬ್ಬರದು ನಾರ್ಮಲ್ ಡೆಲಿವರಿಯಾದರೆ, ಉಳಿದ ಇನ್ನಿಬ್ಬರದ್ದು ತುರ್ತು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿದೆ.
ನಾರ್ಮಲ್ ಡೆಲಿವರಿಯಾದ ಮಹಿಳೆಗೆ ಹೆಣ್ಣು ಮಗು ಜನನವಾಗಿದ್ದು, ಆರೋಗ್ಯವಾಗಿದೆ. ಇನ್ನೊರ್ವ ಸೊಂಕಿತ ಮಹಿಳೆಗೆ ಇದು ಎರಡನೇ ಹೆರಿಗೆಯಾಗಿದೆ. ಮಗು ಹೊಟ್ಟೆಯಲ್ಲೇ ಭೇದಿ ಮಾಡಿಕೊಂಡು ತೊಂದರೆಯಾಗುತ್ತಿದ್ದ ಕಾರಣ ತುರ್ತು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ಹೆಣ್ಣು ಮಗು ಜನನವಾಗಿದೆ..
ಮೂರನೇ ಸೋಂಕಿತ ಮತ್ತೋರ್ವ ಸೊಂಕಿತ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ಹೆಣ್ಣು ಮಗು ಜನಿಸಿದ್ದು, ಆರೋಗ್ಯವಾಗಿದೆ. ಇದುವರೆಗೆ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ 10 ಮಂದಿ ಸೋಂಕಿತ ಗರ್ಭಿಣಿ ಮಹಿಳೆಯರ ಹೆರಿಗೆ ಮಾಡಿಸಲಾಗಿದೆ. ಇನ್ನೂ ಅನೇಕ ಸೋಂಕಿತ ಗರ್ಭೀಣಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೇಲೆ ವಿಶೇಷ ನಿಗಾವಹಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








