ಭಾರತ ವಿಶ್ವದ ಔಷಧಾಲಯ : ಮಾರಿಷಸ್ ಪ್ರಧಾನಿ
ಗಾಂಧಿನಗರ: ಭಾರತ ವಿಶ್ವದ ಔಷಧಾಲಯ, ಕೊರೊನಾ ಸಮಯದಲ್ಲಿ ಆಯುರ್ವೇದ ಔಷಧಿಗಳನ್ನು ಕಳುಹಿಸಿದ್ದಕ್ಕಾಗಿ ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರು ಕೃತಜ್ಞತೆ ಭಾರತಕ್ಕೆ ಸಲ್ಲಿಸಿದ್ದಾರೆ.
8 ದಿನಗಳ ಭಾರತ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯಲ್ಲಿ ತಮ್ಮ ಭಾಷಣದಲ್ಲಿ ಬುಧವಾರ “ಭಾರತವು ಪ್ರಪಂಚದ ಔಷಧಾಲಯವಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆಯುರ್ವೇದ ಔಷಧಿಗಳನ್ನು ಕಳುಹಿಸಿದ್ದಕ್ಕಾಗಿ ನಾವು ಭಾರತಕ್ಕೆ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.
ಅಲ್ಲದೇ ಮಾರಿಷಸ್‌ನಲ್ಲಿ, ಆಯುಷ್ ಅಭ್ಯಾಸವು ಜನಪ್ರಿಯವಾಗಿದೆ ಮತ್ತು ಸಾಂಪ್ರದಾಯಿಕ ಔಷಧಗಳು ಆಧುನಿಕ ಔಷಧಗಳಿಗೆ ಪೂರಕವಾಗಿದೆ ಎಂಬ ಕಲ್ಪನೆಯನ್ನು ನಾವು ಸ್ವೀಕರಿಸಿದ್ದೇವೆ” ಎಂದು ಜುಗ್ನಾಥ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗಾಂಧಿನಗರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯನ್ನು WHO ಡಿಜಿ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.