ಆರ್ ಸಿಬಿ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಿರಸ ಪ್ರದರ್ಶನ ನೀಡುತ್ತಿದ್ದು, ಈ ಬಾರಿ ಶೂನ್ಯದ ದಾಖಲೆಯ ತವಕದಲ್ಲಿದ್ದಾರೆ.
ಈ ಟೂರ್ನಿಯಲ್ಲಿ ಇಲ್ಲಿಯವರೆಗೆ 6 ಪಂದ್ಯಗಳನ್ನಾಡಿರುವ ಮ್ಯಾಕ್ಸ್ ವೆಲ್ ಒಂದು ಬಾರಿ ಎರಡಂಕಿ ದಾಟಿದ್ದಾರೆ. ಅದನ್ನು ಹೊರತುಪಡಿಸಿ ಎರಡು ಬಾರಿ ಮಾತ್ರ ಖಾತೆ ತೆರೆದಿರುವ ಮ್ಯಾಕ್ಸ್‌ವೆಲ್, ಮೂರು ಪಂದ್ಯಗಳಲ್ಲಿ ಶೂನ್ಯಕ್ಕೆ ಬಲಿಯಾಗಿದ್ದಾರೆ.
ಮೊದಲ ಪಂದ್ಯದಲ್ಲಿ ಶೂನ್ಯ, ಎರಡನೇ ಪಂದ್ಯದಲ್ಲಿ 3 ರನ್, ಮೂರನೇ ಪಂದ್ಯದಲ್ಲಿ 28, 4ನೇ ಪಂದ್ಯದಲ್ಲಿ ಶೂನ್ಯ, ಐದನೇ ಪಂದ್ಯದಲ್ಲಿ 1 ರನ್, ಆರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ಗಳ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಇಲ್ಲಿಯವರೆಗೆ ಮ್ಯಾಕ್ ವೆಲ್ 17 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ತಲಾ 17 ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಈ ಪಟ್ಟಿಯಲ್ಲಿ ಜಂಟಿಯಾಗಿ ಮೊದಲ ಸ್ಥಾನ ಅಲಂಕರಿಸಿದ್ದಾರೆ. ವಿದೇಶಿ ಆಟಗಾರರ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಮೊದಲ ಸ್ಥಾನದಲ್ಲಿದ್ದಾರೆ. ಅಲ್ಲದೇ, ಸುನಿಲ್ ನರೈನ್ ಹಾಗೂ ರಶೀದ್ ಖಾನ್ 15 ಬಾರಿ ಶೂನ್ಯಕ್ಕೆ ಔಟ್ ಆಗಿ ಎರಡನೇ ಸ್ಥಾನದಲ್ಲಿದ್ದಾರೆ.