ಮೇ ಎರಡನೇ ವಾರದಿಂದ ದ್ವಿತೀಯ ಪಿಯು ಪರೀಕ್ಷೆ –
ಜೂನ್ ಮೊದಲ ವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಸುರೇಶ್ ಕುಮಾರ್
ಬೆಂಗಳೂರು, ಜನವರಿ06: ದ್ವಿತೀಯ ಪಿಯು ಪರೀಕ್ಷೆಗಳು ಮೇ ಎರಡನೇ ವಾರ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಶಿಕ್ಷಣ ಇಲಾಖೆಯು ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಮುಂದಿನ ಕಲಿಕೆಗಾಗಿ ಬೋಧಿಸಬೇಕಾಗಿರುವ ಪಠ್ಯಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ದ್ವಿತೀಯ ಪಿಯು ಮತ್ತು ಎಸ್.ಎಸ್.ಎಲ್.ಸಿ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲಾ ಹಂತದಲ್ಲಿ ಮೌಲ್ಯಮಾಪನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯದ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಈ ಬಾರಿ ಜಾರಿಯಲ್ಲಿರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1346486133979373568?s=19
https://twitter.com/SaakshaTv/status/1346485806001655810?s=19








