ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @siddaramaiah ನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. https://t.co/VKMmEVXzgT
— B.S.Yediyurappa (@BSYBJP) August 4, 2020
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.