ಮಯಾಂಕ್ ಔಟ್, ರೋಹಿತ್ ಇನ್ : 3ನೇ ಟೆಸ್ಟ್ ಗೆ ಟೀಂ ಇಂಡಿಯಾ ಪ್ರಕಟ
ಸಿಡ್ನಿ : ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಭಾರತದ ತಂಡ ಪ್ರಕಟವಾಗಿದೆ.
ರೋಹಿತ್ ಶರ್ಮಾ ಭಾರತ ತಂಡದ ಪರ ಇನ್ನಿಂಗ್ಸ್ ಆರಂಭಿಸಲಿದ್ದು, ವೇಗಿ ನವದೀಪ್ ಸೈನಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.
ಸಿಡ್ನಿ ಮೈದಾನದಲ್ಲಿ ನಾಳೆಯಿಂದ ಮೂರನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ಇದಕ್ಕೆ ಟೀಂ ಇಂಡಿಯಾದ 11ರ ಬಳಗ ಘೋಷಣೆಯಾಗಿದ್ದು, ಕೊಟ್ಟ ಅವಕಾಶವನ್ನು ಬಳಸಿಕೊಳ್ಳದ ಕನ್ನಡಿಗ ಮಯಾಂಕ್ ಅಗರ್ ವಾಲ್ ಸ್ಥಾನ ಕಳೆದುಕೊಂಡಿದ್ದಾರೆ.
ಮಯಾಂಕ್ ಅಗರ್ ವಾಲ್ ಕಳೆದ ಎರಡು ಪಂದ್ಯಗಳ ನಾಲ್ಕು ಇನ್ನಿಂಗ್ಸ್ ನಲ್ಲಿ ಕಳಪೆ ಪ್ರದರ್ಶನ ನೀಡಿ, ಟೀಕೆಗಳಿಗೆ ಒಳಗಾಗಿದ್ದರು.
ಇನ್ನು ನಾಳೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರೋಹಿತ್ ಜೊತೆ ಗಿಲ್ ಆರಂಭಿಕನಾಗಿ ಮುಂದುವರೆಯಲಿದ್ದಾರೆ.
ಗಾಯಾಳು ವೇಗಿ ಉಮೇಶ್ ಯಾದವ್ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದುಕೊಂಡಿದ್ದು, ನಾಳೆ ಚೊಚ್ಚಲ ಟೆಸ್ಟ್ ಪಂದ್ಯವಾಡಲಿದ್ದಾರೆ.
ಭಾರತದ ತಂಡ ಹೀಗಿದೆ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ರವೀಂದ್ರ ಜಡೇಜಾ, ಆರ್. ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ವಿರುದ್ಧ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಕೆ.ಎಲ್ ರಾಹುಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









