ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ಹಿಂದೂಗಳ ಕನಸಾದ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅನೇಕ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ. ಇದೀಗ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ದಲಿತ ಶ್ರೀಗಳಾದ ಮಹಾಮಂಡೇಶ್ವರ ಕನ್ಹಯ್ಯ ಪ್ರಭುನಂದನ್ ಗಿರಿ ಅವರಿಗೆ ಆಹ್ವಾನ ನೀಡಬೇಕು ಎಂದು ಬಿಎಸ್ ಪಿಯ ಮುಖ್ಯಸ್ಥೆ ಹಾಗೂ ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಅವರು ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಮಾಯಾವತಿ ಅವರು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಸಮಾರಂಭಕ್ಕೆ 200 ಇತರ ಸಂತರೊಂದಿಗೆ ದಲಿತ ಶ್ರೀಗಳನ್ನು ಆಹ್ವಾನಿಸಿದ್ದರೆ ಚೆನ್ನಾಗಿತ್ತು. ದಲಿತ ಶ್ರೀಗಳನ್ನು ಆಹ್ವಾನಿಸಿದರೆ ದೇಶದಲ್ಲಿ ಜಾತಿರಹಿತ ಸಮಾಜವನ್ನು ಸ್ಥಾಪಿಸುವ ಸಾಂವಿಧಾನಿಕ ಉದ್ದೇಶದ ಮೇಲೆ ಸ್ವಲ್ಪ ಪರಿಣಾಮ ಬೀರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...