ಬ್ರೀಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ suicide
ಬೀದರ್ : ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರೀಮ್ಸ್ ಮೆಡಿಕಲ್ ಕಾಲೇಜಿನ ಪಿಜಿ ಹಾಸ್ಟೆಲ್ ನಲ್ಲಿ ನಡೆದಿದೆ.
24 ವರ್ಷದ ವಿನೂತ್ ಕಾಂಬಳೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನೂತ್ ಕಾಂಬಳೆ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಎಂದು ತಿಳಿದುಬಂದಿದೆ.
ವಿನೂತ್ ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ವಿದ್ಯಾರ್ಥಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.