ಬೆಂಗಳೂರಿನಲ್ಲಿ ಬೆಡ್ ಸಿಗದೇ ಇಬ್ಬರು ಸಂಬಂಧಿಕರನ್ನು ಕಳೆದುಕೊಂಡ ನಟಿ ಮೀರಾ ಚೋಪ್ರಾ

1 min read

ಬೆಂಗಳೂರಿನಲ್ಲಿ ಬೆಡ್ ಸಿಗದೇ ಇಬ್ಬರು ಸಂಬಂಧಿಕರನ್ನು ಕಳೆದುಕೊಂಡ ನಟಿ ಮೀರಾ ಚೋಪ್ರಾ

ಮುಂಬೈ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು  ಕೂಡ  ಮಹಾಮಾರಿಗೆ ಬಲಿಯಾಗಿದ್ದಾರೆ. ಸಿನಿ ತಾರೆಯರು ಸಹ ತಮ್ಮವರ ಚಿಕಿತ್ಸೆಗಾಗಿ ಬೆಡ್ ಸಿಗದೇ ಪರದಾಡಿದ್ಧಾರೆ. ಅನೇಕರು ತಮ್ಮ ಆಪ್ತರನ್ನ ಕಳೆದುಕೊಂಡಿದ್ದಾರೆ. ಇದೀಗ ಬಾಲಿವುಡ್ ನಟಿ ಮೀರಾ ಚೋಪ್ರಾ ಅವರ ಇಬ್ಬರು ಸಂಬಂಧಿಕರು ಬೆಂಗಳೂರಿನಲ್ಲಿ ಬೆಡ್ ಸಿಗದೇ ಕೋವಿಡ್ ಗೆ ಬಲಿಯಾಗಿದ್ದಾರೆ.

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೋದರ ಸಂಬಂಧಿಯಾಗಿರುವ ಮೀರಾ ಚೋಪ್ರಾ ತಮ್ಮ ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ನಟಿ ಸಾಮಾಜಿಕ ಜಾಲತಾಣದ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

‘ಕೇವಲ 10 ದಿನದಲ್ಲಿ ನನ್ನ ಇಬ್ಬರು ಸಂಬಂಧಿಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಬ್ಬ ಸಹೋದರಿಗೆ ಎರಡು ದಿನಗಳಾದರೂ ಐಸಿಯು ಬೆಡ್ ಸಿಗಲಿಲ್ಲ. ಮತ್ತೊಬ್ಬರು ಆಕ್ಸಿಜನ್ ಮಟ್ಟ ಕುಸಿತಗೊಂಡು ಮೃತಪಟ್ಟಿದ್ದಾರೆ. ಇಬ್ಬರಿಗೂ ವಯಸ್ಸು ಸುಮಾರು 40 ವರ್ಷ ಆಗಿತ್ತು’ ಎಂದು ಮೀರಾ ಚೋಪ್ರಾ ತಿಳಿಸಿದ್ದಾರೆ.

ಇದೇ ವೇಳೆ ‘ನನಗೆ ಇನ್ನು ಏನಾಗುತ್ತಿದೆ ಎಂದು ನನಗೆ ತಿಳಿದಿಲ್ಲ. ನನ್ನ ಕುಟುಂಬದಲ್ಲಿ ಕಳೆದ 10 ದಿನಗಳಲ್ಲಿ 2 ಸಾವುಗಳು ಸಂಭವಿಸಿವೆ. ಇದು ನನ್ನ ಭರವಸೆಯನ್ನು ಸಂಪೂರ್ಣ ಹುಸಿಗೊಳಿಸಿದೆ. ಅವರನ್ನು ಉಳಿಸಲು ನಾವು ಏನನ್ನೂ ಮಾಡಲಾಗಲಿಲ್ಲ. ಮುಂದೆ ಏನಾಗಬಹುದು ಎಂಬ ಬಗ್ಗೆ ನಾನು ನಿರಂತರ ಭಯದಲ್ಲಿದ್ದೇನೆ’ ಎಂದು ಹೇಳಿಕೊಂಡಿದ್ಧಾರೆ.

‘ಗರ್ಭಿಣಿ ಮಹಿಳೆಯರು ಆಮ್ಲಜನಕದ ಕೊರತೆಯಿಂದ ಹೆರಿಗೆಯಾದ ನಂತರ ಸಾಯುತ್ತಿದ್ದಾರೆ. ಈ ನವಜಾತ ಶಿಶುವಿಗೆ ನಾವು ಯಾವ ಜೀವನವನ್ನು ನೀಡುತ್ತಿದ್ದೇವೆ. ಟ್ವಿಟ್ಟರ್‌ ನಲ್ಲಿ ಭಯಾನಕ ಕಥೆಗಳನ್ನು ಓದುತ್ತಿದ್ದೇನೆ. ಕೆಲವೊಮ್ಮೆ ಟ್ವಿಟ್ಟರ್‌ನಿಂದ ದೂರವಿರುವುದೇ ಉತ್ತಮ ಎನಿಸುತ್ತದೆ. ಆದರೆ ಹೆಚ್ಚಿನ ಜನರಿಗೆ ಸಂದೇಶವನ್ನು ರವಾನಿಸುವ ಮೂಲಕ ನಾನು ಯಾರಿಗಾದರೂ ಸಹಾಯ ಮಾಡಬಹುದೆಂದು ನಾನು ಭಾವಿಸುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd