Belgaum ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಆರಂಭ
ಬೆಳಗಾವಿ : ನಗರದ ಸುವರ್ಣ ಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.
ಸೌಧದ ಮೂರನೇ ಮಹಡಿಯಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ ಸಭೆ ನಡೆಯುತ್ತಿದೆ.
ಕೊರೊನಾ ಹಿನ್ನೆಲೆ ಸಿಎಂ ಯಡಿಯೂರಪ್ಪ ಸಚಿವರು, ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಸದ್ಯ ರಾಜ್ಯದಲ್ಲಿ ಕೊರೊನಾ ವೈರಸ್ ಕಂಟ್ರೋಲ್ ಗೆ ಬರುತ್ತಿದೆ.
ರಾಜ್ಯದಲ್ಲಿ ಇನ್ನೂ ಜೂನ್ 14 ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ಅಲ್ಲದೆ ಅನ್ ಲಾಕ್ ಪ್ರಕ್ರಿಯೆ ಹೇಗೆ ಆರಂಭ ಮಾಡಬೇಕು..? ಎಂಬುದರ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಇನ್ನು ಸಿಎಂ ಸಭೆಯಲ್ಲಿ ಡಿಸಿಎಂ ಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಸುಧಾಕರ, ಸಚಿವರಾದ ಉಮೇಶ್ ಕತ್ತಿ,
ಶಶಿಕಲಾ ಜೋಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಅನಿಲ ಬೆನಕೆ, ಅಭಯ ಪಾಟೀಲ, ಅಂಜಲಿ ನಿಂಬಾಳಕರ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ.









