ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಪತಿ ಮೇಘನಾ ರಾಜ್ ಮೇಘನಾ ರಾಜ್ ತುಂಬು ಗರ್ಭಿಣಿಯಾಗಿದ್ದು, ಮನೆಯವರು ಸರಳವಾಗಿ ಸೀಮಂತ ಶಾಸ್ತ್ರವನ್ನು ನೆರವೇರಿಸಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆ ತುಂಬಾ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ.
ಪತಿಯ ಅಗಲಿಕೆಯ ನೋವಿನಲ್ಲಿರುವ ಮೇಘನಾ ರಾಜ್ ಚಿರುವಿನ ದೊಡ್ಡ ಕಟೌಟ್ ಇಟ್ಟು ಅದರ ಮುಂದೆ ಮೇಘನಾ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.
ಇದನ್ನೂ ಓದಿ : ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ..!
ಮೇಘನಾ ಚೇರ್ ಮೇಲೆ ಕುಳಿತಿದ್ದು, ಅವರ ಹಿಂದೆ ಚಿರುವಿನ ದೊಡ್ಡ ಕಟೌಟ್ ಇಟ್ಟಿರುವುದನ್ನು ಕಾಣಬಹುದಾಗಿದೆ.
ಈ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮತ್ತು ಕೆಲ ಆಪ್ತರು ಮಾತ್ರ ಭಾಗಿಯಾಗಿದ್ದರು.