ಕಾಶ್ಮೀರದಲ್ಲಿ ನೆತ್ತರು ಹರಿಯೋದು ನಿಲ್ಲಬೇಕೆಂದ್ರೆ ಪಾಕ್ ನೊಂದಿಗೆ ಕೇಂದ್ರ ಮಾತುಕತೆ ಆರಂಭಿಸಬೇಕು – ಮಫ್ತಿ
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದಿದ್ದು, ನಾಲ್ವರು ಉಗ್ರರ ಹತ್ಯೆ ಹಾಗೂ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಹಾಗೂ ಮಾಜಿ ಕಾಶ್ಮೀರದ ಸಿಎಂ ಮೆಹಬೂಬಾ ಮಫ್ತಿ ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿಯನ್ನ ನಿಲ್ಲಿಸಲು, ಶಾಂತಿ ಕಾಪಾಡಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಆಚಾರ್ಯ ಚಿತ್ರದಲ್ಲಿ ಚಿರಂಜೀವಿಗೆ ಸವಾಲ್ ಹಾಕಲಿರುವ ಬೆಂಗಾಳಿ ಖ್ಯಾತ ನಟ
ಕೇಂದ್ರಾಡಳಿತ ಪ್ರದೇಶದಲ್ಲಿನ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಾದಿಯನ್ನು ಕಂಡುಕೊಳ್ಳಬೇಕಾಗಿದೆ ಎಂದು ಹೇಳಿರುವ ಮುಫ್ತಿ, ಪಾಕಿಸ್ತಾನ ಮತ್ತು ಜಮ್ಮು-ಕಾಶ್ಮೀರದ ಜನರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದಿದ್ದಾರೆ. ಜಮ್ಮು-ಕಾಶ್ಮೀರದ ಜನ, ಪೊಲೀಸರು ಹಾಗೂ ಯೋಧರು ಪ್ರಾಣ ತ್ಯಾಗ ಮಾಡುತ್ತಿರುವಾಗ, ಇಲ್ಲಿನ ಹಿಂಸಾಚಾರಕ್ಕೆ ಪಾಕ್ ಪ್ರಚೋದನೆ ಕಾರಣ ಎಂದು ಬಿಜೆಪಿ ಪದೇ ಪದೇ ಹೇಳುತ್ತಿದೆ. ಹಾಗಿದ್ದ ಮೇಲೆ ಕೇಂದ್ರ ಸರ್ಕಾರ ಪಾಕಿಸ್ತಾನದೊಂದಿಗೆ ಮಾತುಕತೆ ಪ್ರಕ್ರಿಯೆಯನ್ನು ಆರಂಭಿಸಲಿ. ರಕ್ತದೋಕುಳಿ ನಿಲ್ಲಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಚಿಂತಿಸಬೇಕಾಗಿದ್ದು, ಮಾತುಕತೆ ಪ್ರಕ್ರಿಯೆಯನ್ನು ಆರಂಭಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.