ಕಾಂಗ್ರೆಸ್ ಪಾದಯಾತ್ರೆಗೆ ವ್ಯಂಗ್ಯವಾಡಿದ ಕೇಸರಿಗೆ ಹುಲಿಯಾ ಡಿಚ್ಚಿ siddaramaiah saaksha tv
ಬೆಂಗಳೂರು : ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ..
ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು…! ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾ ಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ ಎಂದು ವ್ಯಂಗ್ಯವಾಡಿತ್ತು.
ಬಿಜೆಪಿಯ ಈ ಟ್ವೀಟ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ನಡೆಸಲು ತೀರ್ಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ. ಪಾದಯಾತ್ರೆಗೆ ನಾನು ಹೋಗ್ತೇನೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಬರ್ತಾರೆ. ರಾಜ್ಯದ ಹಿತಾಸಕ್ತಿಯ ಕಾಳಜಿ ಇದ್ದವರು ಯಾರಾದ್ರೂ ಬರಬಹುದು ಎಂದು ಬರೆದುಕೊಂಡಿದ್ದಾರೆ.