Mekedatu Padayathre : ಬೆಂಗಳೂರು ನಗರದಲ್ಲಿ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ಬೇಕಾಯಿತು. ಜನಸಾಮಾನ್ಯರು ಓಡಾಡುವುದು ಹೇಗೆ.. ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಿ ಎಂದು ತಾಕೀತು ಮಾಡಿದೆ.
ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಪ್ರತಿಭಟನೆಗಳನ್ನು ಫ್ರೀಡಂಪಾರ್ಕ್ ನಲ್ಲಿ ಮಾತ್ರವೇ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ಹೊರಬಂದಿದೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಅಡಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಕಾನೂನು ರೀತಿ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ.