BJP | ರಾಜಕೀಯ ಮಾಡಲ್ಲ ಎಂದ ಸಿದ್ದರಾಮಯ್ಯನವರೇ ಪಾದಯಾತ್ರೆ ಮಾಡಿದ್ದೇಕೆ
ಬೆಂಗಳೂರು : ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ, ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಕರೆದ ಸರ್ವಪಕ್ಷಗಳ ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ,
ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ?
ಡಿಕೆಶಿಯೊಂದಿಗೆ ಪೈಪೋಟಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇ?
ಈಗ ಕೇಂದ್ರ ಸರ್ಕಾರವನ್ನು ದೂರುವ ಬದಲು ಸೋನಿಯಾ ಗಾಂಧಿ ಮೂಲಕ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಬಹುದಲ್ಲವೇ? pic.twitter.com/ozlWDLeKOM
— BJP Karnataka (@BJP4Karnataka) March 22, 2022
ಇದಕ್ಕೆ ಪ್ರತಿಯಾಗಿ ಬಿಜೆಪಿ, ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ, ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ? ಡಿಕೆಶಿಯೊಂದಿಗೆ ಪೈಪೋಟಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇ? ಈಗ ಕೇಂದ್ರ ಸರ್ಕಾರವನ್ನು ದೂರುವ ಬದಲು ಸೋನಿಯಾ ಗಾಂಧಿ ಮೂಲಕ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಬಹುದಲ್ಲವೇ ಎಂದು ಸಲಹೆ ನೀಡಿದೆ.
ಜೊತೆಗೆ ಮಾನ್ಯ ಸಿದ್ದರಾಮಯ್ಯನವರೇ, ರಾಹುಲ್ ಗಾಂಧಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೂಡಿ ಕೈಯೆತ್ತಿ ರಾಷ್ಟ್ರೀಯ ಕಾಂಗ್ರೆಸ್ ಸಂಪೂರ್ಣ ತಮಿಳುನಾಡು ಸರ್ಕಾರದ ಪರವಿದೆ ಎಂಬ ಸಂದೇಶ ಸಾರಿದ್ದರು. ನೀವು ಪಾದಯಾತ್ರೆ ಮಾಡುವ ಬದಲು ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನು ಕರ್ನಾಟಕದ ಪರ ನಿಲ್ಲುವಂತೆ ಮಾಡಿ ಎಂದು ಹೇಳಿದೆ. mekedatu padayatre siddaramaiah vs BJP tweet war