Mekedatu | ತಮಿಳುನಾಡು ನಡೆಗೆ ಸಿದ್ದರಾಮಯ್ಯ ಖಂಡನೆ
ಬೆಂಗಳೂರು : ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಬಿಜೆಪಿ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಕೊಡಬೇಕು ಮತ್ತು ನಮ್ಮ ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ.
ನಾವು ಮೇಕೆದಾಟು ಯೋಜನೆ ಮಾಡುತ್ತಿರೋದು ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ. 3/11#Mekedatu
— Siddaramaiah (@siddaramaiah) March 22, 2022
ನಾವು ಮೇಕೆದಾಟು ಯೋಜನೆ ಮಾಡುತ್ತಿರೋದು ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ.
ಸುಪ್ರೀಂ ಕೋರ್ಟ್ ನ ಅಂತಿಮ ಆದೇಶ 16/02/2018 ರಲ್ಲಿ ಬಂದಿದೆ. ಸಹಜ ಪರಿಸ್ಥಿತಿಯ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ. ಈ ಆದೇಶವನ್ನು ಎರಡೂ ರಾಜ್ಯಗಳು ಒಪ್ಪಿಕೊಂಡಿದ್ದೇವೆ.
ತನ್ನ ಪಾಲಿನ ನೀರನ್ನು ಪಡೆದುಕೊಳ್ಳುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ವರೆಗೆ ತಮಿಳುನಾಡಿಗೆ ಸುಮಾರು 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ. ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು.
ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ರೂ. 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ. 7/11#Mekedatu
— Siddaramaiah (@siddaramaiah) March 22, 2022
ಬೆಂಗಳೂರು ನಗರದ ಸುಮಾರು 30% ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು?
ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ರೂ. 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ. mekedatu-siddaramaiah slams tamilnadu and karnataka bjp