ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ‘ಪುಷ್ಪ’ ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!

Namratha Rao by Namratha Rao
February 11, 2022
in Cinema, Newsbeat, ಮನರಂಜನೆ
melobba mayavi
Share on FacebookShare on TwitterShare on WhatsappShare on Telegram

Sandalwood : ‘ಪುಷ್ಪ’ ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!

ಇರುವೆ ಪಾತ್ರದ ಮೂಲಕ, ವಿಭಿನ್ನ ಗೆಟ್ಅಪ್ ಮತ್ತು ಮ್ಯಾನರಿಸಮ್ನಲ್ಲಿ ಸಂಚಾರಿ ವಿಜಯ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿದೆ. ‘ಪುಷ್ಪ’ ಚಲನಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಈ ಮಾಫಿಯಾದ ಬ್ಯಾಕ್‌ಡ್ರಾಪ್‌ನಲ್ಲೇ ಸಂಚಾರಿ ವಿಜಯ್ ಅಭಿನಯದ `ಮೇಲೊಬ್ಬ ಮಾಯಾವಿ’ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಅರಣ್ಯಪ್ರದೇಶವನ್ನೇ ಹೊದ್ದುಕೊಂಡಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ಹರಳು ಕಲ್ಲು ದಂಧೆ ಮತ್ತೆ ಕಾರ್ಯಾರಂಭಗೊಂಡಿದೆ. ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪುಷ್ಪಗಿರಿ ಅರಣ್ಯದಲ್ಲಿ ಈ ನಿಗೂಢ ಹರಳುಕಲ್ಲಿನ ಗಣಿಗಾರಿಕೆ ನಡೆಯುತ್ತಿದೆ. ಆಭರಣ, ಉಂಗುರುಗಳಿಗೆ ಬಳಸುವ ಈ ಹರಳಿನ ಕಲ್ಲಿಗಾಗಿ ಅಕ್ರಮ ದಂಧೆಕೋರರು ಹುಡುಕಾಟ ನಡೆಸುತ್ತಿದ್ದು ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ದಶಕಗಳ ಹಿಂದೆ ನಿಂತೂ ಹೋಗಿದ್ದ ಹರಳು ಕಲ್ಲಿನ ಗಣಿಗಾರಿಕೆ ಮತ್ತೆ ಆರಂಭಗೊಂಡಿದ್ದು ಕೂಜಿಮಲೆ, ಸುಟ್ಟತ್ ಮಲೆ ಅರಣ್ಯ ಪ್ರದೇಶದಲ್ಲಿ ಹೊಳೆಯುವ ಕಲ್ಲಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಚ್ಚರಿಯ ವಿಚಾರವೆಂದರೆ, `ಮೇಲೊಬ್ಬ ಮಾಯಾವಿ’ ಚಿತ್ರತಂಡ ಈ ಅಪಾಯದ ಜಾಗಗಳಲ್ಲೇ ಚಿತ್ರೀಕರಣವನ್ನು ಮಾಡಿತ್ತು.

melobba mayavi film - saakahatv

ಪುಷ್ಪಗಿರಿ ಅರಣ್ಯವಲಯದ ಕೂಜಿಮಲೆ ಮತ್ತು ಸುಟ್ಟತ್ ಮಲೆಯಲ್ಲಿ ಈಗ ಅಕ್ರಮ ದಂಧೆ ಮತ್ತೇ ಗರಿಗೆದರಿದೆ. ಕಳೆದ ಎರಡು ದಶಕಗಳ ಹಿಂದೆ ಸುಬ್ರಹ್ಮಣ್ಯ ಮತ್ತು ಕೊಡಗಿಗೆ ಹೊಂದಿಕೊಂಡಿರುವ ಕೂಜಿಮಲೆ ಮತ್ತು ಸುಟ್ಟತ್ ಮಲೆ ಎಂಬ ಬೆಟ್ಟಗಳಲ್ಲಿ ಹರಳು ಕಲ್ಲು ಪತ್ತೆಯಾಗಿತ್ತು. ಈ ಕಲ್ಲಿಗೆ ಆಗ ಕೆಜಿಯೊಂದಕ್ಕೆ 500 ರೂಪಾಯಿ ಇಂದ ಆರಂಭವಾಗಿ ಸಾವಿರಾರು ರೂಪಾಯಿ ಬೆಲೆ ದೊರೆಯುತ್ತಿತ್ತು. ಆದರೀಗ ಈ ಹರಳು ಕಲ್ಲಿಗೆ ರಾಜಸ್ಥಾನ ,ಗುಜರಾತ್ , ಮುಂಬೈ ಆಭರಣ ತಯಾರಿಕರಿಂದ ಭಾರೀ ಬೇಡಿಕೆ ಇದೆ. ಒಂದು ಮಾಹಿತಿಯ ಪ್ರಕಾರ ಈ ಹರಳು ಕಲ್ಲಿಗೆ ಪ್ರಸ್ತುತ 1 ಕೆಜಿಗೆ 30 ರಿಂದ 40 ಸಾವಿರ ರೂಪಾಯಿ ಇದೆ ಎಂದು ಹೇಳಲಾಗಿದೆ. ಈ ಎಲ್ಲಾ ಅಂಶಗಳನ್ನು ಚಿತ್ರತಂಡ `ಮೇಲೊಬ್ಬ ಮಾಯಾವಿ’ಯಲ್ಲಿ ಮನೋರಂಜನೆಯೊಂದಿಗೆ ಪ್ರೇಕ್ಷಕರ ಮುಂದಿಡಲಿದೆ.

ಹಣದ ಆಸೆಗೆ ಕಾರ್ಮಿಕರು ಗುಡ್ಡದಲ್ಲಿ ಅಪಾಯಕಾರಿ ಸುರಂಗ ಕೊರೆದು ಹೊಳೆಯುವ ಕಲ್ಲುಗಳಿಗಾಗಿ ಹುಡುಕಾಟ ನಡೆಸುತ್ತಾರೆ.. ಇನ್ನು ಸುರಂಗ ಕೊರೆದು ಹರಳುಕಲ್ಲು ತೆಗೆಯುವ ವೇಳೆ ಸುರಂಗ ಕುಸಿದು ಅಲ್ಲಿಯೇ ಸಮಾಧಿಯಾದ ಘಟನೆಗಳು ಕೂಡ ನಡೆದಿವೆ. ಆದರೆ ದಶಕಗಳ ಬಳಿಕ ಮತ್ತೆ ಈ ಭಾಗದಲ್ಲಿ ಹರಳುಕಲ್ಲು ಗಣಿಗಾರಿಕೆ ಆರಂಭವಾಗಿದೆ. ಭೂಮಿಯನ್ನು ನೂರಾರು ಅಡಿಗಳಷ್ಟು ಅಗೆದು ಹರಲು ಕಲ್ಲುಗಳ ಶೋಧ ಕಾರ್ಯ ಮಾಡಲಾಗುತ್ತಿದೆ. ಬ್ರಿಟಿಷರು ಈ ಬೆಟ್ಟವನ್ನು ‘ರೆಡ್ ಸ್ಟೋನ್ ವ್ಯಾಲಿ’ ಅಂತಾ ಕರೆಯುತ್ತಿದ್ದರು. ಆದರೆ ಆಗ ಜನ ಆ ಬಗ್ಗೆ ಹೆಚ್ಚು ಉತ್ಸುಕರಾಗಿರಲಿಲ್ಲ. ಈ ದಂಧೆಗೆ ದಂಧೆಕೋರರು ಮಹಿಳೆಯರು, ಮಕ್ಕಳನ್ನೂ ಬಳಸುತ್ತಿದ್ದಾರೆ ಎಂಬ ಸುದ್ದಿಯೂ ಇದೆ. ಅಲ್ಲದೇ ಈ ದಂಧೆಯಿಂದ ಪೃಕೃತಿಗೂ ಅಪಾರ ನಷ್ಟವುಂಟಾಗುತ್ತಿದೆ. ಪುಷ್ಪಗಿರಿಯ ತಳಭಾಗದಲ್ಲಿರುವ ಸುಳ್ಯ ತಾಲೂಕಿನ ಗಡಿ ಗ್ರಾಮಗಳಾದ ಕೊಲ್ಲಮೊಗ್ರು, ಕಲ್ಮಕಾರು, ಬಾಳಿಗೋಡು, ಹರಿಹರ ಮುಂತಾದ ಪ್ರದೇಶಗಳು ಕಳೆದ ಎರಡು ವರ್ಷಗಳಿಂದ ಪ್ರವಾಹದ ಪರಿಸ್ಥಿತಿ ಎದುರಿಸುತ್ತಿದೆ. ಬೆಟ್ಟ ಅಗೆದಿರುವ ಕಾರಣ ಭಾರೀ ಮಳೆಗೆ ಮಣ್ಣು ಕುಸಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರವಾಹದ ವೇಳೆಯಲ್ಲೂ ಬೆಟ್ಟದಿಂದ ಹರಳು ಕಲ್ಲುಗಳು ಗ್ರಾಮಸ್ಥರ ಜಮೀನಿಗೆ ಪ್ರವಾಹದ ನೀರಿನಲ್ಲಿ ಬಂದು ಸೇರುತ್ತಿದೆ. ಒಂದು ಕಾಲದಲ್ಲಿ ಹರಳುಕಲ್ಲು ದಂಧೆಯಿಂದಾಗಿ ಹೊಡೆದಾಟ, ಬಡಿದಾಟ ನಡೆದು ಹಲವು ಮಂದಿಯ ಪ್ರಾಣಕ್ಕೆ ಕುತ್ತು ಬಂದಿತ್ತು. ಸುಟ್ಟತ್ ಮಲೆ ಮತ್ತು ಕೂಜಿಮಲೆ ಹರಳು ಕಲ್ಲಿನ ದಂಧೆಗೆ ಅರಣ್ಯ ಇಲಾಖೆ ಕಡಿವಾಣ ಹಾಕಿತ್ತು. ಇದೀಗ ಮತ್ತೆ ಇಲ್ಲಿ ದಂಧೆಯನ್ನು ಸದ್ದಿಲ್ಲದೆ ಆರಂಭಿಸಿರುವುದು ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆ ದಂಧೆಗೆ ಕಡಿವಾಣ ಹಾಕದೆ ಕಣ್ಮುಚ್ಚಿ ಕುಳಿತರೆ ಈ ಬೆಟ್ಟದ ಸಾಲಿನಲ್ಲಿ ಇನ್ನೊಂದಷ್ಟು ಮಂದಿಯ ಹೆಣ ಬೀಳುವುದಂತು ಸತ್ಯ. ಈ ನಿಟ್ಟಿನಲ್ಲಿ `ಮೇಲೊಬ್ಬ ಮಾಯಾವಿ’ ಚಿತ್ರ ಪ್ರಕೃತಿಯ ಮೇಲೆ ನಡೆಯುತ್ತಿರುವ ವಿಕೃತಿಯ ಮೇಲೂ ಬೆಳಕು ಚೆಲ್ಲಲ್ಲಿದೆ.

`ಶ್ರೀ ಕಟೀಲ್ ಸಿನಿಮಾಸ್’ ಬ್ಯಾನರ್‌ನ ಅಡಿಯಲ್ಲಿ ಭರತ್ ಕುಮಾರ್ ಮತ್ತು ತನ್ವಿ ಅಮಿನ್ ಕೊಲ್ಯ ‘ಮೇಲೊಬ್ಬ ಮಾಯಾವಿ’ ಚಿತ್ರದ ನಿರ್ಮಾಪಕರು. ನಿರ್ದೇಶಕ ಬಿ.ನವೀನ್‌ಕೃಷ್ಣ, ಸಂಚಾರಿ ವಿಜಯ್ ಅವರ `ಇರುವೆ’ ಅನ್ನುವ ಪಾತ್ರದ ಮೂಲಕ, ಅಪರೂಪದ ಕಂಟೆಂಟ್‌ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಇನ್ನು, ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ಅನನ್ಯ ಶೆಟ್ಟಿ ನಾಯಕಿಯಾಗಿದ್ದು, ಬಿಗ್‌ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊಟ್ಟ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ.. ಕೃಷ್ಣಮೂರ್ತಿ ಕವತ್ತಾರ್, ಪವಿತ್ರಾ ಜಯರಾಮ್, ಬೆನಕ ನಂಜಪ್ಪ, ಎಮ್.ಕೆ.ಮಠ, ನವೀನ್‌ಕುಮಾರ್, ಲಕ್ಷ್ಮಿ ಅರ್ಪಣ್ , ಮುಖೇಶ್, ಡಾ.ಮನೋನ್ಮಣಿ.. ಹೀಗೆ ಸಾಕಷ್ಟು ರಂಗಭೂಮಿ ಪ್ರತಿಭೆಗಳನ್ನು ಚಿತ್ರದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಕಾಣಬಹುದು.

ಚಿತ್ರಕ್ಕೆ ದಿವಂಗತ ಎಲ್.ಎನ್.ಶಾಸ್ತ್ರೀಯವರ ಸಂಗೀತವಿದ್ದು, ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಚಿತ್ರದ ಕಂಟೆಂಟ್ ಬಗ್ಗೆ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಇನ್ನು, ಚಿತ್ರದ ಹಿನ್ನಲೆ ಸಂಗೀತ ಮಣಿಕಾಂತ್ ಕದ್ರಿಯವರದ್ದಾದರೆ, ಕೆ.ಗಿರೀಶ್ ಕುಮಾರ್ ಚಿತ್ರಕ್ಕೆ ಸಂಕಲನವನ್ನು ಮಾಡಿದ್ದಾರೆ. ದೀಪಿತ್ ಬಿಜೈ ರತ್ನಾಕರ್ ಛಾಯಾಗ್ರಾಹಕರಾಗಿ ದುಡಿದಿರುವ `ಮೇಲೊಬ್ಬ ಮಾಯಾವಿ’ಗೆ ರಾಮು ಅವರ ನೃತ್ಯ ಸಂಯೋಜನೆಯಿದೆ. ಚಿತ್ರತಂಡ ಅತೀಶೀಘ್ರದಲ್ಲಿ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಿದ್ದು… ಚಿತ್ರದ ಹಾಡುಗಳಲ್ಲಿ ಡಿಫೆರೆಂಟ್ ಗೆಟ್‌ಅಪ್ ಮತ್ತು ಮ್ಯಾನರಿಸಮ್‌ನಲ್ಲಿ ಕಾಣಿಸಿಕೊಂಡಿರುವ ಸಂಚಾರಿ ವಿಜಯ್ ಅವರ ಪಾತ್ರಪೋಷಣೆ ಚಿತ್ರದಲ್ಲಿ ಹೇಗಿರಬಹುದು ಅನ್ನೋದೆ ಸಧ್ಯದ ಕುತೂಹಲ.

Tags: #saakshatvkannada filmmelobba mayaviSanchari Vijay
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram